ರಾಜ್ಯ

ಸರ್ಕಾರಿ ಶಾಲೆಗಳ ಮಕ್ಕಳಿಗೂ ಬಂತು ಮೊಬೈಲ್ ಹಾಜರಾತಿ

ಬೆಂಗಳೂರು: ಪ್ರಸಕ್ತ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗಿ ಹಾಜರಾತಿ ಪಡೆಯುವ ಬದಲಾಗಿ, ಶಿಕ್ಷಕರು ಮೊಬೈಲ್‌ನಲ್ಲಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಹಾಜರಾತಿ ದಾಖಲಿಸಿಕೊಳ್ಳಲಿದ್ದಾರೆ.

‘ನಿರಂತರ’ ಯೋಜನೆಯಡಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಸೇರಿ 52,686 ಶಾಲೆಗಳ 52 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಹಾಜರಾತಿಯನ್ನು ಕೃತಕ ಬುದ್ಧಿಮತ್ತೆ ಚಾಲಿತ, ಮುಖ ಚಹರೆ ಗುರುತು ಆಧಾರಿತವಾಗಿ ತೆಗೆದುಕೊಳ್ಳಲಾಗುತ್ತದೆ.

ಇದನ್ನೂ ಓದಿ: ಸರ್ಕಾರಿ ಶಾಲೆಗೆ ಶಿಕ್ಷಕರ ನೇಮಿಸಿ : ಗಡಿಜಿಲ್ಲೆಯಲ್ಲಿ ಪೋಷಕರಿಂದ ಪ್ರತಿಭಟನೆ

ಸುಮಾರು 5 ಕೋಟಿ ರೂ. ವೆಚ್ಚದ ಈ ಯೋಜನೆಯನ್ನು ಕರ್ನಾಟಕ ಸ್ಟೇಟ್ ಡೇಟಾ ಸೆಂಟರ್ ಮೂಲಕ ನಿರ್ವಹಣೆ ಮಾಡಲಾಗುತ್ತದೆ. ಇದಕ್ಕಾಗಿ ಸಾಫ್ಟ್‌ವೇರ್‌ ಕೂಡ ಸಿದ್ಧಪಡಿಸಲಾಗುತ್ತಿದೆ. ಇದು ಗರಿಷ್ಠ ಗೌಪ್ಯತೆ ಮತ್ತು ಸುರಕ್ಷತೆ ಕಾಪಾಡುತ್ತದೆ. ಪ್ರಸಕ್ತ ವರ್ಷದಿಂದಲೇ ಇ-ಹಾಜರಾತಿ ಜಾರಿಗೆ ಬರಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

54 mins ago

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…

1 hour ago

ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…

1 hour ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ನೀರಾವರಿ ಪೈಪ್‌ಗಳ ಬೆಲೆಯಲ್ಲೂ ಏರಿಕೆ

ಮೈಸೂರು: ಇರಾನ್‌ ಮತ್ತು ಇಸ್ರೇಲ್‌ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…

2 hours ago

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡಿಜಿಟಲ್‌ ಅರೆಸ್ಟ್‌ ಪ್ರಕರಣ: ಎಚ್ಚೆತ್ತುಕೊಳ್ಳದ ಜನತೆ

ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್‌ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು…

2 hours ago

ವಾಟಾಳ್‌ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…

2 hours ago