ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಅರೆಸ್ಟ್ ಆಗಿ ಪರಪ್ಪನ ಅಗ್ರಹಾರದ ಜೈಲು ಸೇರಿದ್ದರು ಕೂಡ ಅವರ ಅಭಿಮಾನಿಗಳು ಮಾತ್ರ ದರ್ಶನ್ ಗೆ ಸಪೋರ್ಟ್ ಮಾಡುತ್ತಲೇ ಇದ್ದಾರೆ. ಒಂದು ಕಡೆ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು ದರ್ಶನ್ ವಿರುದ್ಧ ಒಂದಲ್ಲ ಒಂದು ಸಾಕ್ಷ್ಯಗಳನ್ನಕಲೆ ಹಾಕುತ್ತಲೆ ಇದ್ದಾರೆ. ಮತ್ತೊಂದು ಕಡೆ ದರ್ಶನ್ ನೋಡಬೇಕು ಅಂತಾ ಪ್ರತಿದಿನ ಜೈಲಿನ ಬಳಿ ಬಂದು ಅಭಿಮಾನಿಗಳು ಕಾಯುತ್ತಿದ್ದಾರೆ.
ಈ ಎಲ್ಲದರ ನಡುವೆ ಇದೀಗ ಮತ್ತೊಂದು ಟ್ರೆಂಡ್ ಶುರುವಾಗುತ್ತಿದೆ. ದರ್ಶನ್ ಖೈದಿ ನಂಬರ್ 6106 ಅನ್ನು ಅಭಿಮಾನಿಗಳು ಮೊಬೈಲ್ ಕವರ್ ಆಗಿ ಮಾಡಿಕೊಳ್ಳುತ್ತಿದ್ದಾರೆ. ಬೈಕ್ ಮೇಲೆ , ಕಾರುಗಳ ಮೇಲೆ, ಆಟೋಗಳ ಮೇಲೆ ಖೈದಿ ಸಂಖ್ಯೆಯನ್ನ ಬರೆಸಿಕೊಳ್ಳುತ್ತಿದ್ದ ನೂರಾರು ಅಭಿಮಾನಿಗಳು ಇದೀಗ ಮೊಬೈಲ್ ಕವರ್ ಗೂ ʻಕೈಗೆ ಬೇಡಿ ಹಾಕಿಸಿರುವ ಸ್ಟಿಕ್ಕರ್ ಜೊತೆಗೆ ಖೈದಿ ಸಂಖ್ಯೆʼ ಹಾಕಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹರಿಬಿಡುತ್ತಿದ್ದಾರೆ. ಸದ್ಯ ಈ ಫೋಟೋಗಳು ವೈರಲ್ ಆಗುತ್ತಿದ್ದು, ಖೈದಿ ನಂಬರ್ 6106 ಸ್ಟಿಕ್ಕರ್ ಗಳಿಗೆ ಫುಲ್ ಡಿಮ್ಯಾಂಡ್ ಶುರು ಆಗಿದೆ.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…