ಬೆಂಗಳೂರು: ರಾಜ್ಯಾದ್ಯಂತ ಅಬ್ಬರಿಸಿ ಬೊಬ್ಬರಿದಿದ್ದ ವರುಣ ಈಗ ಕೊಂಚ ಬಿಡುವು ನೀಡಿದ್ದಾನೆ. ಜೂನ್.8ರವರೆಗೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇನ್ನು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹೇಳಿದೆ.
ಇದನ್ನೂ ಓದಿ:- ಶೀಘ್ರದಲ್ಲೇ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಹಣ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬಂಟ್ವಾಳ, ಆಗುಂಬೆ, ಕುಮಟಾ, ಸಿದ್ದಾಪುರ, ಉಡುಪಿ, ಕಾರವಾರ, ಕಾರ್ಕಳ, ಮೂಡುಬಿದಿರೆ, ಕುಂದಾಪುರ, ಹೊನ್ನಾವರದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದ್ದು, ಜೂನ್.8ರವರೆಗೂ ಮಳೆ ಮುಂದುವರಿಯಲಿದೆ ಎಂದು ಸೂಚನೆ ನೀಡಲಾಗಿದೆ.





