ಬೆಂಗಳೂರು : ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರುವ ಮೂಲಕ ಭಾನುವಾರ ಚಾಲನೆ ನೀಡಿದರು.
ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ, ಬಳಿಕ ಹೆಲಿಕಾಪ್ಟರ್ ಮುಖಾಂತರ ಮೇಖ್ರಿ ವೃತ್ತದ ಬಳಿಯ ಮಿಲಿಟರಿ ಬೇಸ್’ಗೆ ಆಗಮಿಸಿದರು.
ಅಲ್ಲಿಂದ ರಸ್ತೆ ಮಾರ್ಗವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಆಗಮಿಸಿ, ಬೆಳಗಾವಿ – ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು.
ನಂತರ ಅಮೃತಸರ-ಶ್ರೀ ಮಾತಾ ವೈಷ್ಣೋದೇವಿ ಕತ್ರಿ ಮತ್ತು ಅಜ್ನಿ (ನಾಗ್ಪುರ)-ಪುಣೆ ನಡುವಿನ ಇನ್ನೂ ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ವರ್ಚುವಲ್ ಮೂಲಕ ಹಸಿರು ನಿಶಾನೆ ತೋರಿದರು.





