ಬೆಂಗಳೂರು: ಬೆಲೆ ಏರಿಕೆಗೆ ನರೇಂದ್ರ ಮೋದಿ ಸರ್ಕಾರವೇ ಕಾರಣ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯ ಸರ್ಕಾರ ಬಸ್, ಹಾಲು, ವಿದ್ಯುತ್ ಸೇರಿದಂತೆ ಅನೇಕ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬೆಲೆ ಏರಿಕೆ ವಿರುದ್ಧ ನಾಳೆಯಿಂದ ಬಿಜೆಪಿ ಬೃಹತ್ ಹೋರಾಟ ನಡೆಸಲು ಸಜ್ಜಾಗುತ್ತಿದೆ. ಈ ವಿಚಾರವಾಗಿ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ದೇಶದಲ್ಲಿ ಉಂಟಾಗಿರುವ ಬೆಲೆ ಏರಿಕೆಗೆ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ನೀತಿಗಳೇ ಕಾರಣ. ಬೆಲೆ ಏರಿಕೆಯಿಂದ ಜನರ ಜೀವನ ನರಕವಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಕೊನೆಗೂ ಬಿಜೆಪಿಯವರಿಗೆ ಜ್ಞಾನೋದಯವಾಗಿದೆ. ಪ್ರತಿಭಟನೆಯನ್ನು ಕೇಂದ್ರ ಸರ್ಕಾರದ ವಿರುದ್ಧ ಮಾಡಿದರೇ ತುಂಬಾ ಒಳ್ಳೆಯದು ಎಂದು ಲೇವಡಿ ಮಾಡಿದ್ದಾರೆ.