ರಾಜ್ಯ

ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೆಲೆ ಏರಿಕೆಗೆ ನರೇಂದ್ರ ಮೋದಿ ಸರ್ಕಾರವೇ ಕಾರಣ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯ ಸರ್ಕಾರ ಬಸ್‌, ಹಾಲು, ವಿದ್ಯುತ್‌ ಸೇರಿದಂತೆ ಅನೇಕ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬೆಲೆ ಏರಿಕೆ ವಿರುದ್ಧ ನಾಳೆಯಿಂದ ಬಿಜೆಪಿ ಬೃಹತ್‌ ಹೋರಾಟ ನಡೆಸಲು ಸಜ್ಜಾಗುತ್ತಿದೆ. ಈ ವಿಚಾರವಾಗಿ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ದೇಶದಲ್ಲಿ ಉಂಟಾಗಿರುವ ಬೆಲೆ ಏರಿಕೆಗೆ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ನೀತಿಗಳೇ ಕಾರಣ. ಬೆಲೆ ಏರಿಕೆಯಿಂದ ಜನರ ಜೀವನ ನರಕವಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಕೊನೆಗೂ ಬಿಜೆಪಿಯವರಿಗೆ ಜ್ಞಾನೋದಯವಾಗಿದೆ. ಪ್ರತಿಭಟನೆಯನ್ನು ಕೇಂದ್ರ ಸರ್ಕಾರದ ವಿರುದ್ಧ ಮಾಡಿದರೇ ತುಂಬಾ ಒಳ್ಳೆಯದು ಎಂದು ಲೇವಡಿ ಮಾಡಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ರೈಲು ಟಿಕೆಟ್ ರದ್ದತಿ ಹೊಸ ನಿಯಮದ ಬಗ್ಗೆ ಅರಿವಿರಲಿ

ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ…

29 mins ago

ಓದುಗರ ಪತ್ರ: ಅಂಚೆ ಕಚೇರಿಯಲ್ಲಿ ಹೆಚ್ಚುವರಿ ಕೌಂಟರ್ ತೆರೆಯಿರಿ

ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…

31 mins ago

ಓದುಗರ ಪತ್ರ: ಇರುವುದರಲ್ಲೇ ತೃಪ್ತಿ ಕಾಣಬೇಕು

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…

37 mins ago

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

3 hours ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

3 hours ago