Mysore
30
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

ಟ್ರಂಪ್‌ ಜೊತೆ ಸೇರಿಕೊಂಡು ಮೋದಿ ನಮ್ಮ ದೇಶ ಹಾಳು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೋದಿ ಮೂಗು ಹಿಡಿದುಕೊಂಡು ಕಂಟ್ರೋಲ್‌ ಮಾಡುತ್ತಿದ್ದಾನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ಈ ಕುರಿತು ಕಲಬುರ್ಗಿಯಲ್ಲಿ ಇಂದು ಮಾತನಾಡಿದ ಅವರು, ಅಮೇರಿಕಾಗೆ ಈಗ ಸೊಕ್ಕು ಬಂದಿದೆ. ಇಡೀ ಜಗತ್ತನ್ನು ಹೆದರಿಸುವ ಕೆಲಸವನ್ನ ಮಾಡುತ್ತಿದೆ. ಇದರಿಂದ ವಿಶ್ವದಲ್ಲಿ ಶಾಂತಿ ನೆಲೆಸುವುದಿಲ್ಲ. ಇಂತಹ ಅಮೇರಿಕಾ ಅಧ್ಯಕ್ಷ ಟ್ರಂಪ್‌ ಜೊತೆ ಸೇರಿಕೊಂಡು ಮೋದಿಯವರು ನಮ್ಮ ದೇಶವನ್ನು ಹಾಳು ಮಾಡುತ್ತಿದ್ದಾರೆ. ಮೋದಿ ಈ ದೇಶವನ್ನು ಗುಲಾಮಗಿರಿಗೆ ಒಯ್ಯುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Tags:
error: Content is protected !!