ಕೋಲಾರ : ಮೋದಿಯವರು ಪ್ರಧಾನಿಯಾಗಿ ನಾಲಾಯಕ್ ಅಂತ ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ. ಇಂಥಾ ನಾಲಾಯಕ್ ಗೆ ಮತ ಹಾಕ್ತೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಕೋಲಾರ (ಶಿಡ್ಳಘಟ್ಟ)ದ ರೋಡ್ ಶೋನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವಿನ ಜನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಯಾಚಿಸಿ ಈ ರೀತಿ ಪ್ರಶ್ನಿಸಿದರು.
ನಿರುದ್ಯೋಗಿ ಯುವಕ/ಯುವತಿಯರಿಗೆ ಪಕೋಡ ಮಾರಿ ಅನ್ನೋಕೆ ಮೋದಿ ಪ್ರಧಾನಿಯೇ ಆಗಬೇಕಿತ್ತಾ.
ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂತ ಇಡೀ ದೇಶದ ಯುವಕ, ಯುವತಿಯರಿಗೆ ನಂಬಿಸಿದರು. ಮೋದಿ ಮಾತನ್ನು ನಂಬಿ ಯುವ ಸಮೂಹ ಮೋದಿಯವರಿಗೆ ಮತ ಹಾಕಿದ್ರು.
ಹೀಗೆ ಮತ ಹಾಕಿದವರೆಲ್ಲಾ ಡಿಗ್ರಿ ಮುಗಿಸಿದ ಮೇಲೆ ಕೆಲ್ಸ ಕೊಡಿ ಎಂದು ಕೇಳಿದರೆ, “ಹೋಗಿ ಪಕೋಡ ಮಾರಾಟ ಮಾಡಿ” ಅಂದ್ರು.
ಇದು ದೇಶದ ಯುವ ಸಮೂಹಕ್ಕೆ ಮಾಡಿದ ಮಹಾದ್ರೋಹ ಅಲ್ಲವೇ? ಮಹಾನ್ ನಂಬಿಕೆ ದ್ರೋಹ ಅಲ್ಲವೇ? ಪಕೋಡ ಮಾರೋದನ್ನು ಹೇಳಿಕೊಡೋಕೆ ಇವರು ಪ್ರಧಾನಿ ಆಗಬೇಕಿತ್ತಾ? ಎಂದು ಪ್ರಶ್ನಿಸಿದರು.
ಮೋದಿಯವರು ಪ್ರಧಾನಿಯಾಗಿ ನಾಲಾಯಕ್ ಅಂತ ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ. ಇಂಥಾ ನಾಲಾಯಕ್ ಗೆ ಮತ ಹಾಕ್ತೀರಾ? ಹತ್ತತ್ತು ವರ್ಷ ಮತ ಹಾಕಿದ್ರಲ್ಲಾ ನಿಮಗೆ, ದೇಶಕ್ಕೆ ಏನಾದ್ರೂ ಸಿಕ್ಕಿತಾ ? ಈ ಹತ್ತು ವರ್ಷದಲ್ಲಿ ಏನೇನೂ ಕೊಡದವರು ಈ ಬಾರಿ ನಿಮ್ಮ ಮತ ಕೇಳುತ್ತಿದ್ದಾರೆ, ಹೀಗೆ ಮತ ಕೇಳುವ ಯೋಗ್ಯತೆಯಾಗಲೀ, ಅರ್ಹತೆಯಾಗಲೀ BJP ಯವರಿಗೆ ಇದೆಯೇ ಎಂದು ಪ್ರಶ್ನಿಸಿದರು.
ನಾಲಾಯಕ್ ಮೋದಿಯವರು ಬರುವ ಮೊದಲು ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಬೇಳೆಕಾಳು, ಅಡುಗೆ ಎಣ್ಣೆ ಬೆಲೆ ಎಷ್ಟಿತ್ತು?ಈಗ ಎಷ್ಟಾಗಿದೆ?
ನಾವು ನುಡಿದಂತೆ ನಡೆದಿದ್ದೇವೆ. ಪ್ರತಿ ಕುಟುಂಬಗಳ ಜೇಬಿಗೆ ಪ್ರತಿ ತಿಂಗಳು 4 ರಿಂದ 6 ಸಾವಿರ ರೂಪಾಯಿ ಹಾಕುತ್ತಿದ್ದೇವೆ. ನಾವು ನುಡಿದಂತೆ ನಡೆದು ಬಂದು ಓಟು ಕೇಳುತ್ತಿದ್ದೇವೆ.
ನಮಗೆ ಮತ ನೀಡಿ. ನಿಮ್ಮ ಮತಕ್ಕೆ ಗೌರವ ಕೊಟ್ಟು ಅಭಿವೃದ್ಧಿಯ ಲಾಭ ನಿಮ್ಮ ಜೇಬಿಗೆ, ನಿಮ್ಮ ಖಾತೆಗೆ ಹಾಕುವ ಕೆಲಸವನ್ಮು ನಾವು ಮಾಡ್ತೇವೆ ಎಂದು ಘೋಷಿಸಿದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…