ರಾಜ್ಯ

ಆರ್‌ಎಸ್‌ಎಸ್‌ ನೋಂದಣಿಯಾಗದಿರಲು ಕಾರಣ ಬಿಚ್ಚಿಟ್ಟ ಮೋಹನ್‌ ಭಾಗವತ್‌

ಬೆಂಗಳೂರು: ಹಿಂದೂ ಧರ್ಮವನ್ನು ಈಗಲೂ ನೋಂದಣಿ ಮಾಡಿಲ್ಲ. ಅದೇ ರೀತಿ ನಾವು ಕೂಡ ಸಂಘದ ನೋಂದಣಿ ಮಾಡಿಸಿಕೊಂಡಿಲ್ಲ ಎಂದು ಆರ್‍ಎಸ್‍ಎಸ್ ಸರಸಂಚಾಲಕ ಮೋಹನ್ ಭಾಗವತ್ ತಮ್ಮ ನಿರ್ಧಾರವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಮೋಹನ್‌ ಭಾಗವತ್‌ ಅವರು, ಆರ್‍ಎಸ್‍ಎಸ್ ಸ್ಥಾಪನೆಯಾಗಿದ್ದು, 1925ರಲ್ಲಿ. ಆಗ ದೇಶವನ್ನು ಬ್ರಿಟಿಷರು ಆಳುತ್ತಿದ್ದರು. ಅವರ ಬಳಿ ನಾವು ಆರ್‍ಎಸ್‍ಎಸ್‍ನ್ನು ನೋಂದಣಿ ಮಾಡಿಸಿಕೊಳ್ಳಬೇಕಿತ್ತೇ? ನೀವು ಅದನ್ನು ನಿರೀಕ್ಷೆ ಮಾಡುತ್ತೀರಾ? ನಾವು ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ್ದೆವು. ಸ್ವಾತಂತ್ರ್ಯ ಬಂದ ನಂತರವು ಸಂಘಗಳನ್ನು ನೋಂದಣಿ ಮಾಡಬೇಕೆಂಬ ಕಡ್ಡಾಯವಿಲ್ಲ ಎಂದು ಪ್ರತಿಪಾದಿಸಿದರು.

ಸ್ವತಂತ್ರ ಬಂದ ನಂತರವೂ ನಾವು ನೋಂದಣಿ ಕಡ್ಡಾಯ ಮಾಡಿಲ್ಲ. ಯಾರು ಏನೇ ಹೇಳಲಿ ನಮ್ಮದು ಸ್ವತಂತ್ರ ಹಾಗೂ ಕಾನೂನಾತ್ಮಕವಾಗಿ ಸಂಸ್ಥೆಯಾಗಿ ದೇಶದ ಸಂವಿಧಾನದಡಿಯೇ ಕೆಲಸ ಮಾಡುತ್ತದೆ. ಹೀಗಾಗಿ ನೋಂದಣಿ ಮಾಡಿಸಿಲ್ಲ. ಅಷ್ಟೇ ಏಕೆ ಹಿಂದೂ ಧರ್ಮ ಈಗಲೂ ಎಲ್ಲಾದರೂ ನೋಂದಣಿಯಾಗಿದೆಯೇ ಎಂದು ಮರು ಪ್ರಶ್ನೆ ಮಾಡಿದರು.

ದೇಶದಲ್ಲಿ ಮೂರು ಬಾರಿ ಆರ್‍ಎಸ್‍ಎಸ್ ನಿಷೇಧಕ್ಕೆ ಒಳಪಟ್ಟಿತ್ತು. ಮಹಾತ್ಮ ಗಾಂಧಿ ಹತ್ಯೆ ಪ್ರಕರಣ, ತುರ್ತು ಪರಿಸ್ಥಿತಿ ಮತ್ತು ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಧ್ವಂಸ ಮಾಡಿದಾಗ ನಿಷೇಧ ಹೇರಲಾಗಿತ್ತು. ಆದರೆ ಈ ಮೂರು ಪ್ರಕರಣಗಳಲ್ಲಿ ಆರ್‍ಎಸ್‍ಎಸ್ ಕೈವಾಡ ಇಲ್ಲದಿರುವುದು ಸಾಬೀತಾಗಿದ್ದರಿಂದ ನ್ಯಾಯಾಲಯ ಕೂಡ ಮಧ್ಯಪ್ರವೇಶ ಮಾಡಲಿಲ್ಲ ಎಂದು ಹೇಳಿದರು.

ನಮ್ಮದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ನಾವು ಕಾಲ ಕಾಲಕ್ಕೆ ತೆರಿಗೆ ಕಟ್ಟುತ್ತೇವೆ. ಗುರುದಕ್ಷಿಣೆ ಹೊರತಾಗಿ ಆದಾಯ ತೆರಿಗೆ ಇಲಾಖೆ ತೆರಿಗೆ ಕಟ್ಟಲು ಸೂಚಿಸಿದೆ. ಎಲ್ಲವೂ ದಾಖಲೆಯಲ್ಲಿ ಇವೆ ಎಂದು ತಿಳಿಸಿದರು.

ಆರ್‍ಎಸ್‍ಎಸ್‍ಗೆ ಒಂದು ಶಾಶ್ವತವಾದ ಸಂಕೇತ ಬೇಕಾಗಿತ್ತು. ಹೀಗಾಗಿ ನಾವು ಭಾಗವಧ್ವಜವನ್ನು ನಂಬಿದ್ದೇವೆ. ಹಾಗಂತ ದೇಶದ ತ್ರಿವರ್ಣ ಧ್ವಜವನ್ನು ನಾವು ಎಂದಿಗೂ ವಿರೋಧಿಸಿಲ್ಲ. ನಮ್ಮ ರಾಷ್ಟ್ರದ ಹೆಮ್ಮೆಯ ಸಂಕೇತವಾಗಿರುವ ಯಾವಾಗಲೂ ನಾವು ಅತ್ಯುನ್ನತ ಗೌರವ ಕೊಡುತ್ತೇವೆ ಎಂದರು.

ಆಂದೋಲನ ಡೆಸ್ಕ್

Recent Posts

ಕರೂರು ಕಾಲ್ತುಳಿತ ಪ್ರಕರಣ: ಸಿಬಿಐ ವಿಚಾರಣೆಗೆ ಹಾಜರಾದ ದಳಪತಿ ವಿಜಯ್‌

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್‌ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…

5 mins ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ಬಿಕೋ ಎನ್ನುತ್ತಿರುವ ದುಬೈ

ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್‌ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ…

10 mins ago

ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ: ಇಸ್ರೇಲ್‌ ಪ್ರಧಾನಿ ಕಚೇರಿ ಸ್ಪಷ್ಟನೆ

ಜೆರುಸೇಲಂ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…

42 mins ago

ಇಂದು ಸಂಜೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ…

1 hour ago

ತಾಪಮಾನ ಏರಿಕೆ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 hour ago

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

6 hours ago