Dharmasthala dead bodies burried case
ಬೆಂಗಳೂರು : ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್‌ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಈ ಬಗ್ಗೆ ಬಹಳಷ್ಟು ತಪ್ಪು ಕಲ್ಪನೆಗಳನ್ನು ಹುಟ್ಟುಹಾಕಲಾಗುತ್ತಿದೆ. ಡಿಜಿ ಹಂತದ ಅಧಿಕಾರಿಯನ್ನು ಎಸ್‌ಐಟಿ ಮುಖ್ಯಸ್ಥರನ್ನಾಗಿ ಮಾಡಬೇಕು ಎಂದು ಸರ್ಕಾರ ತೀರ್ಮಾನ ಮಾಡಿತು. ಪ್ರಣವ್ ಮೊಹಾಂತಿಯವರನ್ನು ನೇಮಿಸಿದ್ದೇವೆ. ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಅವರ ಹೆಸರಿದೆ. ಅವರನ್ನು ಕೇಂದ್ರದ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಇಲ್ಲಸಲ್ಲದ ಪೋಸ್ಟಿಂಗ್‌ಗಳನ್ನು ಮಾಡಲಾಗುತ್ತಿದೆ. ಇದು ಸರಿ ಕಾಣಿಸುವುದಿಲ್ಲ. ಪ್ರಕರಣದಲ್ಲಿ ಸರ್ಕಾರದ ಆಸಕ್ತಿ ಏನಿದೆ? ಎಸ್‌ಐಟಿ ಯಾಕೆ ರಚಿಸುತ್ತಿದ್ದೆವು ಎಂದು ಪ್ರಶ್ನಿಸಿದ ಅವರು, ಪ್ರಕರಣದಲ್ಲಿ ಸತ್ಯಾಂಶ ಹೊರಬರಬೇಕು ಎಂಬುದಷ್ಟೆ ಸರ್ಕಾರಕ್ಕೆ ಮುಖ್ಯ ಎಂದು ಹೇಳಿದರು.
ಈ ನಿಟ್ಟಿನಲ್ಲಿ ಎಸ್‌ಐಟಿ ಮಾಡಿದ್ದೇವೆ. ಎಸ್‌ಐಟಿ ತನಿಖೆ ನಡೆಸಿ, ವರದಿ ಸಲ್ಲಿಸಿದ ನಂತರ ಸತ್ಯಾಸತ್ಯತೆ ಹೊರಬರುತ್ತವೆ. ನಮಗೆ ಬೇಕಿರುವುದು ಅಷ್ಟೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಯಾರನ್ನು ರಕ್ಷಣೆ ಮಾಡಬೇಕು, ಯಾರನ್ನೋ ಸಿಕ್ಕಿಹಾಕಿಸಬೇಕು ಎಂಬ ಅಜೆಂಡಾ ಸರ್ಕಾರಕ್ಕೆ ಖಂಡಿತವಾಗಿಯೂ ಇಲ್ಲ. ಯಾರು ಕೂಡ ಅದನ್ನು ತಪ್ಪು ಭಾವನೆಯಿಂದ ನೋಡಬಾರದು. ಪಾರದರ್ಶಕವಾಗಿ ತನಿಖೆ ಮಾಡಬೇಕು ಎಂದು ಹೇಳಿದ್ದೇವೆ. ಇದು ಸರ್ಕಾರಕ್ಕೆ ಇರುವ ಅಜೆಂಡಾ ಎಂದು ಹೇಳಿದರು.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…