ಮಂಗಳೂರು: ಕಾಂಗ್ರೆಸ್ ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ಅವರ ಶವ ಪತ್ತೆಯಾಗಿದೆ.
ಕೂಳೂರಿನ ಸೇತುವೆ ಸಮೀಪವೇ ಇರುವ ಮತ್ತೊಂದು ಸೇತುವೆ ಬಳಿ ವ್ಯಕ್ತಿಯೊಬ್ಬರ ತಲೆ ಕಾಣಿಸುತ್ತಿತ್ತು. ಸಮೀಪಕ್ಕೆ ತೆರಳಿದ ಈಜುಗಾರರು ಇದು ಮುಮ್ತಾಜ್ ಅಲಿ ಅವರ ದೇಹ ಎಂದು ಖಚಿತಪಡಿಸಿದ್ದಾರೆ.
ಫಲ್ಗುಣಿ ನದಿಯಿಂದ ಶವವನ್ನು ಮೇಲಕ್ಕೆ ಎತ್ತಲಾಗಿದ್ದು, ಮುಮ್ತಾಜ್ ಅಲಿ ಅವರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ನೊಂದಿದ್ದ ಮುಮ್ತಾಜ್ ಅಲಿ ಅವರು, ನಿನ್ನೆ ಬೆಳಗಿನ ಜಾವ ಯಾರಿಗೂ ತಿಳಿಯದಂತೆ ಮನೆ ಬಿಟ್ಟು ಹೋಗಿದ್ದರು. ಈ ವೇಳೆ ಕೂಳೂರು ಹೈವೇಯಲ್ಲಿ ಖಾಸಗಿ ಬಸ್ಸೊಂದಕ್ಕೆ ಡಿಕ್ಕಿ ಹೊಡೆದಿದ್ದರು.
ಈ ಹಿನ್ನೆಲೆಯಲ್ಲಿ ಸೇತುವೆ ಬಳಿಯೇ ಕಾರು ನಿಲ್ಲಿಸಿದ್ದ ಪರಿಣಾಮ ನದಿಯಲ್ಲಿ ಹುಡುಕಾಟ ನಡೆಸಲಾಗಿತ್ತು. ಇಂದು ಮುಮ್ತಾಜ್ ಅಲಿ ಶವ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…