Mysore
29
few clouds

Social Media

ಶನಿವಾರ, 07 ಡಿಸೆಂಬರ್ 2024
Light
Dark

ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸಲು ಪಕ್ಷದಿಂದಲೇ ಹಣ ಹೋಗಿದೆ : ಯತ್ನಾಳ್ ಗಂಭೀರ ಆರೋಪ

ವಿಜಯಪುರ ; ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸಲು ಅಪಾರ ಪ್ರಮಾಣದ ಹಣ ಬಿಜೆಪಿ ಮೂಲದಿಂದಲೇ ಹೋಗಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌  ಗಂಭೀರವಾದ ಆರೋಪ ಮಾಡಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯತ್ನಾಳ್, ಲೋಕಸಭಾ ಚುನಾವಣೆಯಲ್ಲಿ ಪರಾಜೆ ಹೊಂದಿದ ಅಭ್ಯರ್ಥಿಗಳು ಹಾಗೂ ಗೆದ್ದ ಅಭ್ಯರ್ಥಿಗಳ ದೂರುಗಳು ಸಹ ಇವೆ ಆಗಿದೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ವಿ.ಸೋಮಣ್ಣ ಅವರ ದೂರು ಸಹ ಇದೆ. ಚಿಕ್ಕೋಡಿ ಕ್ಷೇತ್ರದ ಜೊಲ್ಲೆ ಅವರದ್ದು ಹೀಗೆ ಆಗಿದೆ. ದೊಡ್ಡ ದೊಡ್ಡ ಜವಾಬ್ದಾರಿ ಇರುವವರು ಈ ರೀತಿ ಮಾಡುವುದರಿಂದ ಪಕ್ಷಕ್ಕೆ ಒಳಿತಲ್ಲ. ಹೀಗಾಗಿ ಈ ವಿಚಾರವಾಗಿ ಸತ್ಯ ಶೋಧನಾ ಸಮಿತಿ ಆಗಬೇಕು ಎಂದು ಒತ್ತಾಯ ಮಾಡಿದರು.
ಅಲ್ಲದೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 350 ರಿಂದ 400 ಸ್ಥಾನಗಳು ಬರುತ್ತವೆ ಎಂದು ನಿರೀಕ್ಷೆ ಇಟ್ಟಿದ್ದೆವು. ಬಹಳ ಕಡೆ ಗದ್ದಲವಾಗಿದೆ. ಕಾರ್ಯಕರ್ತರ ಜೊತೆ ಶಾಸಕರ ಜೊತೆ ಒಳ್ಳೆ ಸಂಬಂಧ ಇಟ್ಟುಕೊಂಡಿರಲಿಲ್ಲ. ಹೀಗಾಗಿ ಸೋಲಿಗೆ ಇವು ಕೂಡ ಕಾರಣವಾಗಿರಬಹುದು ಎಂದು ಹೇಳಿದರು.

Tags: