ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಹಣ ಅಕ್ರಮ ವರ್ಗಾವಣೆ ಆರೋಪದಡಿ ಇಡಿ ವೀರೇಂದ್ರ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು, ಈ ಪ್ರಕರಣ ಸಂಬಂಧ ವೀರೇಂದ್ರ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಪ್ರಕರಣವನ್ನು ಮಂಗಳವಾರ ಕೈಗೆತ್ತಿಕೊಂಡು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಷರತ್ತುಬದ್ಧವಾಗಿ ಜಾಮೀನಿಗೆ ಆದೇಶಿಸಿದ್ದಾರೆ.




