kc veerendra pappy
ಬೆಂಗಳೂರು : ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಅವರನ್ನು 35ನೇ ಸಿಸಿಹೆಚ್ ನ್ಯಾಯಾಲಯ 4 ದಿನ ಇಡಿ ಕಸ್ಟಡಿಗೆ ಒಪ್ಪಿಸಿದೆ.
ಜನಪ್ರತಿನಿಧಿಗಳ ನ್ಯಾಯಾಧೀಶರು ರಜೆಯಲ್ಲಿದ್ದ ಹಿನ್ನೆಲೆ 35ನೇ ಸಿಸಿಹೆಚ್ ಜಡ್ಜ್ ಮುಂದೆ ಇಡಿ ಹಾಜರುಪಡಿಸಿತ್ತು. ಶನಿವಾರ ವೀರೇಂದ್ರ ಪಪ್ಪಿ ಸಿಕ್ಕಿಂನ ಗ್ಯಾಂಗ್ಟಕ್‍ನಲ್ಲಿ ಬಂಧಿಸಲಾಗಿತ್ತು. ಶನಿವಾರ ರಾತ್ರಿಯೇ ಸಿಕ್ಕಿಂನಿಂದ ಬೆಂಗಳೂರಿಗೆ ಕರೆತಂದಿದ್ದ ಇಡಿ ಇವತ್ತು ಬೆಳಗ್ಗೆ ಬೌರಿಂಗ್ ಹಾಸ್ಪಿಟಲ್‍ನಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ, ಶಾಂತಿನಗರ ಇಡಿ ಕಚೇರಿಗೆ ಕರೆತಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿತ್ತು.
ದಾಳಿ ವೇಳೆ ಶಾಸಕ ಪಪ್ಪಿ ಮನೆಯಲ್ಲಿ 12 ಕೋಟಿ ರೂ. ನಗದು, 1 ಕೋಟಿ ರೂ. ವಿದೇಶಿ ಹಣ, 6 ಕೋಟಿ ರೂ. ಮೌಲ್ಯದ ಚಿನ್ನ, 10 ಕೆಜಿ ಬೆಳ್ಳಿ, ಐಷಾರಾಮಿ ಕಾರು, 17 ಬ್ಯಾಂಕ್ ಖಾತೆ ಹಾಗೂ 2 ಬ್ಯಾಂಕ್ ಲಾಕರ್‌ಗಳನ್ನು ಇಡಿ ಸೀಜ್ ಮಾಡಿತ್ತು. ಇಡಿ 14 ದಿನ ತಮ್ಮ ಕಸ್ಟಡಿಗೆ ನೀಡಿ ಅಂತ ರಿಮ್ಯಾಂಡ್‍ನಲ್ಲಿ ಮನವಿ ಮಾಡಿತ್ತು. ಇದೇ ವೇಳೆ ವಿರೇಂದ್ರ ಪಪ್ಪಿ ಸಹೋದರ ಕೆ.ಸಿ. ನಾಗರಾಜ್ ಹಾಗೂ ಬೆಂಬಲಿಗರು ಇಡಿ ಕಚೇರಿ ಮುಂದೆ ಜಮಾಯಿಸಿದ್ದರು.
ವೀರೇಂದ್ರ ಪಪ್ಪಿ ಸಹೋದರ ಕೆಸಿ ತಿಪ್ಪೇಸ್ವಾಮಿ ದುಬೈನಿಂದ ಡೈಮಂಡ್ ಸಾಫ್ಟ್ಟೆಕ್, ಟಿಆರ್‌ಎಸ್ ಟೆಕ್ನಾಲಜೀಸ್, ಪ್ರೈಮ್ 9 ಟೆಕ್ನಾಲಜೀಸ್ ಎಂಬ 3 ವ್ಯವಹಾರ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದಾರೆ. ಈ ಘಟಕಗಳು ಕೆಸಿ ವೀರೇಂದ್ರ ಅವರ ಕಾಲ್ ಸೆಂಟರ್ ಸೇವೆಗಳು ಮತ್ತು ಗೇಮಿಂಗ್ ವ್ಯವಹಾರಕ್ಕೆ ಸಂಬಂಧಿಸಿವೆ ಎಂದು ಇ.ಡಿ ತಿಳಿಸಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…