Mysore
30
overcast clouds

Social Media

ಶನಿವಾರ, 23 ಮೇ 2026
Light
Dark

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

dinesh gundurao

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಬೋಲಾ ಸೋಂಕಿನ ಬಗ್ಗೆ ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ತೀವ್ರ ಎಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿದೆ. ಎಬೋಲಾ ಪೀಡಿತ ದೇಶಗಳಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲು ತೀರ್ಮಾನಿಸಲಾಗಿದೆ. ಈ ಅವಧಿಯಲ್ಲಿ ಪ್ರಯಾಣಿಕರಲ್ಲಿ ಏನಾದರೂ ಅನಾರೋಗ್ಯದ ಲಕ್ಷಣಗಳು ಕಂಡುಬಂದರೆ ತಕ್ಷಣವೇ ಅವರಿಗೆ ವೈದ್ಯಕೀಯ ತಪಾಸಣೆ ಮಾಡಲು ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಹೇಳಿದರು.

 

Tags:
error: Content is protected !!