Mysore
15
clear sky

Social Media

ಗುರುವಾರ, 05 ಫೆಬ್ರವರಿ 2026
Light
Dark

ಮಂಕಿ ಪಾಕ್ಸ್‌: ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಭಾರೀ ಕಟ್ಟೆಚ್ಚರ

ಬೆಂಗಳೂರು: ನೆರೆಯ ದೇಶಗಳಲ್ಲಿ ಮಂಕಿಪಾಕ್ಸ್‌ ಪ್ರಕರಣಗಳು ವರದಿಯಾಗಿರುವುದರಿಂದ ರಾಜ್ಯದ ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.

ಬಂದರು ಹಾಗೂ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ತಪಾಸಣೆ ನಡೆಸಿ ಮಂಕಿಪಾಕ್ಸ್‌ ಶಂಕಿತರನ್ನು ಗುರುತಿಸಿ ಅವರ ಮೇಲೆ ತೀವ್ರ ನಿಗಾ ಇಡುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆಯಂತೆ ಪ್ರಕರಣಗಳು ವರದಿಯಾದ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇಡುವುದು ಅಗತ್ಯ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಈ ರೋಗದ ಶಂಕಿತ ಪ್ರಕರಣಗಳ ನಿರ್ವಹಣೆಗೆ ಬೆಂಗಳೂರಿನ ಇಂದಿರಾನಗರದಲ್ಲಿರು ಸಾಂಕ್ರಾಮಿಕ ರೋಗಗಳ ಆಸ್ಪತ್ರೆ ಹಾಗೂ ಮಂಗಳೂರಿ ವೆನ್ಲಾಕ್‌ ಆಸ್ಪತ್ರೆಗಳನ್ನು ಗುರುತಿಸಲಾಗಿದೆ.

ಶಂಕಿತರಿಗೆ ಆರೋಗ್ಯ ತಪಾಸಣೆ ನಡೆಸಿದಾಗ ಪರೀಕ್ಷೆಯ ವರದಿಯಲ್ಲಿ ರೋಗ ದೃಢಪಟ್ಟರೆ 21 ದಿನಗಳವರೆಗೆ ಅಥವಾ ಗುಳ್ಳೆಗಳು ಸಂಪೂರ್ಣ ನಿವಾರಣೆಯಾಗುವವರೆಗೆ ಪ್ರತ್ಯೇಕವಾಸದಲ್ಲಿ ಇರಿಸಬೇಕು ಎಂದು ತಿಳಿಸಲಾಗಿದೆ.

 

Tags:
error: Content is protected !!