ಬೆಂಗಳೂರು: ನೆರೆಯ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿರುವುದರಿಂದ ರಾಜ್ಯದ ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.
ಬಂದರು ಹಾಗೂ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ತಪಾಸಣೆ ನಡೆಸಿ ಮಂಕಿಪಾಕ್ಸ್ ಶಂಕಿತರನ್ನು ಗುರುತಿಸಿ ಅವರ ಮೇಲೆ ತೀವ್ರ ನಿಗಾ ಇಡುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆಯಂತೆ ಪ್ರಕರಣಗಳು ವರದಿಯಾದ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇಡುವುದು ಅಗತ್ಯ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಈ ರೋಗದ ಶಂಕಿತ ಪ್ರಕರಣಗಳ ನಿರ್ವಹಣೆಗೆ ಬೆಂಗಳೂರಿನ ಇಂದಿರಾನಗರದಲ್ಲಿರು ಸಾಂಕ್ರಾಮಿಕ ರೋಗಗಳ ಆಸ್ಪತ್ರೆ ಹಾಗೂ ಮಂಗಳೂರಿ ವೆನ್ಲಾಕ್ ಆಸ್ಪತ್ರೆಗಳನ್ನು ಗುರುತಿಸಲಾಗಿದೆ.
ಶಂಕಿತರಿಗೆ ಆರೋಗ್ಯ ತಪಾಸಣೆ ನಡೆಸಿದಾಗ ಪರೀಕ್ಷೆಯ ವರದಿಯಲ್ಲಿ ರೋಗ ದೃಢಪಟ್ಟರೆ 21 ದಿನಗಳವರೆಗೆ ಅಥವಾ ಗುಳ್ಳೆಗಳು ಸಂಪೂರ್ಣ ನಿವಾರಣೆಯಾಗುವವರೆಗೆ ಪ್ರತ್ಯೇಕವಾಸದಲ್ಲಿ ಇರಿಸಬೇಕು ಎಂದು ತಿಳಿಸಲಾಗಿದೆ.
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…
ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…
ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…
ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…
ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…