Mysore
29
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಮಂಕಿಪಾಕ್ಸ್‌ ಭೀತಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್‌

ಬೆಂಗಳೂರು: ದೇಶದಲ್ಲಿ ಪ್ರಥಮ ಬಾರಿಗೆ ಮಂಕಿಪಾಕ್ಸ್‌ ಪ್ರಕರಣ ಖಚಿತಗೊಂಡ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯ ಪರೀಕ್ಷೆ ಆರಂಭಿಸಿ, ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್‌ ಘೋಷಣೆ ಮಾಡಲಾಗಿದೆ.

ಕೋವಿಡ್‌-19 ಪ್ರಕರಣದ ಬೆನ್ನಲ್ಲೇ ಮಂಕಿಪಾಕ್ಸ್‌ ಭಾರತದಲ್ಲಿ ಮೊದಲ ಬಾರಿಗೆ ಈ ಪ್ರಕರಣ ನವದೆಹಲಿಯಲ್ಲಿ ಕಾಣಿಸಿಕೊಂಡ ನಂತರ, ಅಧಿಕಾರಿಗಳು ವೈರಸ್‌ ಹರಡುವುದನ್ನು ತಡೆಯಲು ಮುನ್ನಚ್ಚರಿಕೆಯ ಕ್ರಮವಾಗಿ ತ್ವರಿತವಾಗಿ ಕಾರ್ಯನಿರ್ವಹಿಸಲು ಮುಂದಾಗಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಪ್ರತಿಯೊಬ್ಬ ಪ್ರಯಾಣಿಕರಿಗೆ ವೈರಸ್‌ ಪರೀಕ್ಷೆ ಮಾಡಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, ಪ್ರತಿದಿನ ಸುಮಾರು 2 ಸಾವಿರ ಪ್ರಯಾಣಿಕರನ್ನು ಪರೀಕ್ಷಿಸಲಾಗುತ್ತಿದೆ.

ಒಂದು ವೇಳೆ ಪ್ರಯಾಣಿಕರಿಗೆ ವೈರಸ್‌ ಖಚಿತಗೊಂಡರೆ ಕೋವಿಡ್‌-೧೯ ಸಾಂಕ್ರಾಮಿಕ ರೋಗದ ಆರಂಭಿಕ ಹಂತಗಳಲ್ಲಿ ಜಾರಿಗೆ ತಂದ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗುತ್ತದೆ. ಬಳಿಕ ಸೋಂಕಿಗೆ ಒಳಪಟ್ಟ ವ್ಯಕ್ತಿಗಳನ್ನು 21 ದಿನಗಳ ಕಾಲ ಕ್ವಾರಂಟೈನ್ನಲ್ಲಿ ಇರಿಸಲಾಗುತ್ತದೆ.

ಅಂತೆಯೇ ಆಫ್ರಿಕಾದ ಮಹಾಮಾರಿ ರೋಗವಾಗಿ ಕಾಡುತ್ತಿರುವ ಎಂಪಾಕ್ಸ್‌ ವೈರಸ್‌ ಪ್ರವೇಶವನ್ನು ತಡೆಯಲು ರಾಜ್ಯದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ.

 

Tags: