ಬೆಂಗಳೂರು: ದೇಶದಲ್ಲಿ ಪ್ರಥಮ ಬಾರಿಗೆ ಮಂಕಿಪಾಕ್ಸ್ ಪ್ರಕರಣ ಖಚಿತಗೊಂಡ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯ ಪರೀಕ್ಷೆ ಆರಂಭಿಸಿ, ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ಕೋವಿಡ್-19 ಪ್ರಕರಣದ ಬೆನ್ನಲ್ಲೇ ಮಂಕಿಪಾಕ್ಸ್ ಭಾರತದಲ್ಲಿ ಮೊದಲ ಬಾರಿಗೆ ಈ ಪ್ರಕರಣ ನವದೆಹಲಿಯಲ್ಲಿ ಕಾಣಿಸಿಕೊಂಡ ನಂತರ, ಅಧಿಕಾರಿಗಳು ವೈರಸ್ ಹರಡುವುದನ್ನು ತಡೆಯಲು ಮುನ್ನಚ್ಚರಿಕೆಯ ಕ್ರಮವಾಗಿ ತ್ವರಿತವಾಗಿ ಕಾರ್ಯನಿರ್ವಹಿಸಲು ಮುಂದಾಗಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಪ್ರತಿಯೊಬ್ಬ ಪ್ರಯಾಣಿಕರಿಗೆ ವೈರಸ್ ಪರೀಕ್ಷೆ ಮಾಡಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, ಪ್ರತಿದಿನ ಸುಮಾರು 2 ಸಾವಿರ ಪ್ರಯಾಣಿಕರನ್ನು ಪರೀಕ್ಷಿಸಲಾಗುತ್ತಿದೆ.
ಒಂದು ವೇಳೆ ಪ್ರಯಾಣಿಕರಿಗೆ ವೈರಸ್ ಖಚಿತಗೊಂಡರೆ ಕೋವಿಡ್-೧೯ ಸಾಂಕ್ರಾಮಿಕ ರೋಗದ ಆರಂಭಿಕ ಹಂತಗಳಲ್ಲಿ ಜಾರಿಗೆ ತಂದ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗುತ್ತದೆ. ಬಳಿಕ ಸೋಂಕಿಗೆ ಒಳಪಟ್ಟ ವ್ಯಕ್ತಿಗಳನ್ನು 21 ದಿನಗಳ ಕಾಲ ಕ್ವಾರಂಟೈನ್ನಲ್ಲಿ ಇರಿಸಲಾಗುತ್ತದೆ.
ಅಂತೆಯೇ ಆಫ್ರಿಕಾದ ಮಹಾಮಾರಿ ರೋಗವಾಗಿ ಕಾಡುತ್ತಿರುವ ಎಂಪಾಕ್ಸ್ ವೈರಸ್ ಪ್ರವೇಶವನ್ನು ತಡೆಯಲು ರಾಜ್ಯದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ.
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…