ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಬಿಟ್ಟು ಬಿಡದೇ ಸುರಿಯುತ್ತಿದ್ದು, ಮುಖ್ಯವಾಗಿ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಿಗೆ ಅನ್ವಯಿಸುವಂತೆ ಹವಾಮಾನ ಇಲಾಖೆ ಅಲ್ಲಿನ ಸ್ಥಳಗಳಿಗೆ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 24 ಗಂಟೆಗಳ ಕಾಲ ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್, ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಇಂದು ಯೆಲ್ಲೋ ಅಲರ್ಟ್, ಕಲಬುರ್ಗಿ ಮತ್ತು ಬೀದರ್ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಮಳೆಗಿಂತ ಗಾಳಿಯ ರಭಸ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವಡೆ ಸಾಧಾರಣ ಹಾಗೂ ಕೆಲವೆಡೆ ಭಾರೀ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.
ಇನ್ನೂ ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಹಾಗೂ ಹಾಸನದಲ್ಲೂ ಹಗುರ ಮಳೆಯಾಗಲಿದ್ದು, ಅಲ್ಲಲ್ಲಿ ಗಾಳಿಯ ರಭಸ ಜಾಸ್ತಿಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…