Mysore
27
broken clouds

Social Media

ಬುಧವಾರ, 15 ಜುಲೈ 2026
Light
Dark

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ ಬಾರಿಗೆ ಇಂತಹ ಅತ್ಯಂತ ಕೆಟ್ಟ ಪರಿಸ್ಥಿತಿ ಉಂಟಾಗಿದೆ.

ಜೂನ್‌ ತಿಂಗಳಿನಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಪ್ರಮಾಣದ ಮಳೆಯಾಗಿದ್ದು, ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಕೊರತೆ ಎದ್ದು ಕಾಣುತ್ತಿದೆ.

ಭಾರತದಲ್ಲಿ ಜೂನ್‌ ತಿಂಗಳಿನಲ್ಲಿ ವಾಡಿಕೆಗಿಂತ 165 ಮಿ.ಮೀ ಮಳೆಯಾಗಬೇಕಿತ್ತು. ಆದರೆ ಈ ಬಾರಿ ಎನ್‌ನಿನೋ ಪ್ರಭಾವದ ಕಾರಣದಿಂದಾಗಿ ಮಳೆ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದೆ.

ಜೂನ್‌ ಅಂತ್ಯದ ವೇಳೆಗೆ ದೇಶದಲ್ಲಿ ಕೇವಲ 92.1 ಮಿ.ಮೀ ಮಳೆಯಷ್ಟೇ ದಾಖಲಾಗಿದ್ದು, ಶೇಕಡಾ 42ರಷ್ಟು ಮಳೆ ಕೊರತೆ ಉಂಟಾಗಿದೆ.

 

 

 

Tags:
error: Content is protected !!