ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ ಜುಲೈ.26ರವರೆಗೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ತಯಾರಿ ನಡೆಸಿವೆ.
ಲೋಕಸಭೆ ಚುನಾವಣೆ ಮುಗಿದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ವಾಲ್ಮೀಕಿ ನಿಗಮ ಹಗರಣ, ವಕ್ಫ್ ಬೋರ್ಡ್ ನಲ್ಲಿ ನಡೆದಿದೆ ಎನ್ನಲಾದ ಹಗರಣ, ಬೆಲೆ ಏರಿಕೆಯ ಸದ್ದು ಗದ್ದಲದ ನಡುವೆ ಇಂದಿನಿಂದ ಮುಂಗಾರು ಅಧಿವೇಶನ ಆರಂಭವಾಗುತ್ತಿದೆ.
ಅಧಿವೇಶನದಲ್ಲಿ ಮುಡಾ ಸೈಟ್ ಹಂಚಿಕೆ, ವಾಲ್ಮೀಕಿ ಹಗರಣ ವಿಷಯಗಳು, ಎಸ್‌ಸಿ ಎಸ್ಸ್ಪಿ ಹಣ ಗ್ಯಾರಂಟಿಗೆ ಬಳಕೆ, ಬೆಲೆ ಏರಿಕೆ, ಡೆಂಗಿ ಜ್ವರ, ಕಾನೂನು ಸುವ್ಯವಸ್ಥೆ ವಿಷಯಗಳ ಬಗ್ಗೆ ಬಿಜೆಪಿ-ಜೆಡಿಎಸ್ ರಣತಂತ್ರ ರೂಪಿಸಿದೆ.
ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಟಕ್ಕರ್ ಕೊಡಲು ತಂತ್ರ ರೂಪಿಸಿದ್ದು, ಬಿಜೆಪಿ ಅವಧಿಯ ಭ್ರಷ್ಟಚಾರ, ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಆರೋಪ, ಬಿಜೆಪಿ ಅವಧಿಯ ಕಮಿಷನ್, ಕೊರೋನಾ ಕಾಲದ ಹಗರಣ, ಬಿಟ್ ಕಾಯಿನ್ ಹಗರಣಗಳ ವಿಚಾರಗಳನ್ನು ಪ್ರಸ್ತಾಪಿಸಿ ವಿಪಕ್ಷಗಳಿಗೆ ತಿರುಗೇಟು ನೀಡುವ ಸಾಧ್ಯತೆ ಇದೆ.