ರಾಜ್ಯ

ಹಗರಣಗಳ ಗದ್ದಲ ನಡುವೆ ಇಂದು ಮುಂಗಾರು ಅಧಿವೇಶನ ಆರಂಭ: ʻಕೈʼ ಕಟ್ಟಿಹಾಕಲು ಬಿಜೆಪಿ-ಜೆಡಿಎಸ್‌ ಸಜ್ಜು

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ ಜುಲೈ.26ರವರೆಗೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ತಯಾರಿ ನಡೆಸಿವೆ.

ಲೋಕಸಭೆ ಚುನಾವಣೆ ಮುಗಿದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ವಾಲ್ಮೀಕಿ ನಿಗಮ ಹಗರಣ, ವಕ್ಫ್‌ ಬೋರ್ಡ್‌ ನಲ್ಲಿ ನಡೆದಿದೆ ಎನ್ನಲಾದ ಹಗರಣ, ಬೆಲೆ ಏರಿಕೆಯ ಸದ್ದು ಗದ್ದಲದ ನಡುವೆ ಇಂದಿನಿಂದ ಮುಂಗಾರು ಅಧಿವೇಶನ ಆರಂಭವಾಗುತ್ತಿದೆ.

ಅಧಿವೇಶನದಲ್ಲಿ ಮುಡಾ ಸೈಟ್‌ ಹಂಚಿಕೆ, ವಾಲ್ಮೀಕಿ ಹಗರಣ ವಿಷಯಗಳು, ಎಸ್‌ಸಿ ಎಸ್ಸ್ಪಿ ಹಣ ಗ್ಯಾರಂಟಿಗೆ ಬಳಕೆ, ಬೆಲೆ ಏರಿಕೆ, ಡೆಂಗಿ ಜ್ವರ, ಕಾನೂನು ಸುವ್ಯವಸ್ಥೆ ವಿಷಯಗಳ ಬಗ್ಗೆ ಬಿಜೆಪಿ-ಜೆಡಿಎಸ್‌ ರಣತಂತ್ರ ರೂಪಿಸಿದೆ.

ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌  ಟಕ್ಕರ್‌ ಕೊಡಲು ತಂತ್ರ ರೂಪಿಸಿದ್ದು, ಬಿಜೆಪಿ ಅವಧಿಯ ಭ್ರಷ್ಟಚಾರ, ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಆರೋಪ, ಬಿಜೆಪಿ ಅವಧಿಯ ಕಮಿಷನ್‌, ಕೊರೋನಾ ಕಾಲದ ಹಗರಣ, ಬಿಟ್‌ ಕಾಯಿನ್‌ ಹಗರಣಗಳ ವಿಚಾರಗಳನ್ನು ಪ್ರಸ್ತಾಪಿಸಿ ವಿಪಕ್ಷಗಳಿಗೆ ತಿರುಗೇಟು ನೀಡುವ ಸಾಧ್ಯತೆ ಇದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago