ರಾಜ್ಯ

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ ಕರ್ನಾಟಕ ವಿಧಾನಮಂಡಲ ಅಧಿವೇಶನಕ್ಕೆ 3 ದಿನಗಳ ಮೊದಲೇ ತೆರೆ ಬಿದ್ದಿದೆ.

ಆಗಸ್ಟ್​​ 13ರಿಂದ 27ರ ವರೆಗೆ ಮಳೆಗಾಲದ ಅಧಿವೇಶನ ನಡೆಸಲು ಆರಂಭದಲ್ಲಿ ತೀರ್ಮಾನಿಸಲಾಗಿತ್ತು. ಆದರೀಗ ಮೂರು ದಿನಗಳ ಮುಂಚಿತವಾಗಿಯೇ ಅಂದರೆ ಆಗಸ್ಟ್​​ 24ರಂದೇ ವಿಧಾನ ಸಭೆ ಮತ್ತು ಪರಿಷತ್​​ ಕಲಾಪಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

‘ವಿಪಕ್ಷಗಳಿಗೆ ಹೆದರಿ ಸರ್ಕಾರ ಓಡಿದೆ’
ರಾಜ್ಯ ಸರ್ಕಾರದ ನಡೆ ವಿರುದ್ಧ ವಿಧಾನ ಸಭೆಯ ವಿಪಕ್ಷ ನಾಯಕ ಆರ್. ಅಶೋಕ್​​ ವಾಗ್ದಾಳಿ ನಡೆಸಿದ್ದು, ​20-30 ವರ್ಷಗಳಲ್ಲಿ ಮೊದಲ ಬಾರಿ ವಿಪಕ್ಷಗಳಿಗೆ ಹೆದರಿ ಸರ್ಕಾರ ಓಡಿದೆ. ಸಭಾಧ್ಯಕ್ಷರು ಸರಿಯಾದ ರೀತಿ ಸದನವನ್ನೇ ನಡೆಸಿಲ್ಲ. ಕಾಂಗ್ರೆಸ್ ರಾಜಕೀಯ ಮಾಡಬಹುದು, ನಾವು ಮಾಡಲ್ಲ. ದಲಿತರ ಹಣ ನುಂಗಿದ್ದಾರೆ, ಆ ಹಣ ವಾಪಸಾಗಬೇಕು. ಶೇ.5ರಷ್ಟು ಪಾರ್ಕ್​​ಗಳನ್ನು ಲೂಟಿ ಮಾಡುವುದಕ್ಕೆ ಹೊರಟಿದ್ದಾರೆ ಎಂದವರು ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ಹಿಂಬಾಗಿಲಿನಿಂದ ಓಡಿ ಹೋಗಿದೆ. ಇದು ಭ್ರಷ್ಟರಿಂದ ಭ್ರಷ್ಟರಿಗಾಗಿ ನಡೆಯುತ್ತಿರುವ ಸರ್ಕಾರ. ದಲಿತರ ಹಣ ಲೂಟಿ ಮಾಡಿದವರ ಬಗ್ಗೆ ಅವರಿಗೆ ಭಯ ಕಾಡುತ್ತಿದೆ. ಇವರ ಬಣ್ಣ ಬಯಲಾಗುತ್ತದೆ, ಭ್ರಷ್ಟಾಚಾರ ಬಯಲಿಗೆ ಬರುತ್ತದೆ ಎಂದು ನಾಗೇಂದ್ರರನ್ನು ರಕ್ಷಣೆ ಮಾಡ್ತಿದ್ದಾರೆ. 85 ಕೋಟಿ ಹಗರಣ ಎಂದು ಸ್ವತಃ ಸಿದ್ದರಾಮಯ್ಯನವರೇ ಒಪ್ಪಿಕೊಂಡಿದ್ದರು. ಇಷ್ಟಾದ್ರೂ ಕೂಡ ಸರ್ಕಾರ ಭಂಡತನದಿಂದ ಮೆರೆಯುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಶಾಸಕ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯಪಾಲರಿಗೆ ದೂರು ಸಲ್ಲಿಕೆ
ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ವಿಧಾನಸೌಧದಿಂದ ಲೋಕಭವನಕ್ಕೆ ಬಿಜೆಪಿ ಶಾಸಕರು ಪಾದಯಾತ್ರೆ ನಡೆಸಿದ್ದು, ಸಚಿವ ನಾಗೇಂದ್ರ ವಿಚಾರವಾಗಿ ರಾಜ್ಯಪಾಲರಿಗೆ ದೂರು ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಜೆಡಿಎಸ್ ಶಾಸಕರು ಕೂಡ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

10 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

10 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

11 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

12 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

15 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

16 hours ago