Mysore
15
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

ಬೆಂಗಳೂರು: ರಾಜ್ಯ ವಿಧಾನಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದೆ.

ಇಂದಿನಿಂದ ಆಗಸ್ಟ್.‌ರವರೆಗೆ ಅಧಿವೇಶನ ನಡೆಯಲಿದ್ದು, 24ಕ್ಕೂ ಹೆಚ್ಚು ಮಸೂದೆಗಳಿಗೆ ಸರ್ಕಾರ ಅಂಗೀಕಾರ ಪಡೆದುಕೊಳ್ಳುವ ಸಾಧ್ಯತೆಯಿದೆ.

ಮೊದಲ ದಿನದ ಅಧಿವೇಶನವಾದ ಇಂದು ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಹಾಗೂ ಅಹಮದಾಬಾದ್‌ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಲಾಯಿತು.

ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳು ಕಾರ್ಯತಂತ್ರ ರೂಪಿಸಿದ್ದು, ಇದೆಲ್ಲವನ್ನು ಎದುರಿಸಲು ಆಡಳಿತ ಪಕ್ಷ ಕೂಡ ತಯಾರಿ ನಡೆಸಿದೆ.

ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ, ಅತಿವೃಷ್ಟಿ, ಅನಾವೃಷ್ಟಿ, ಪ್ರವಾಹ, ರಸಗೊಬ್ಬರದ ಅಭಾವ, ಒಳ ಮೀಸಲಾತಿ, ಮತಗಳ್ಳತನದ ಆರೋಪ ಸೇರಿದಂತೆ ಹಲವು ವಿಚಾರಗಳು ಅಧಿವೇಶನದಲ್ಲಿ ಪ್ರತಿಧ್ವನಿಸಲಿವೆ.

ಇನ್ನು ಅಧಿವೇಶನಕ್ಕೂ ಮುಂಚೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಪ್ರತಿಭಟನೆ ನಡೆಸಿದರು.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಜಮಾಯಿಸಿದ ನಾಯಕರು, ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Tags:
error: Content is protected !!