ಬೆಂಗಳೂರು: ರಾಜ್ಯ ವಿಧಾನಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದೆ.
ಇಂದಿನಿಂದ ಆಗಸ್ಟ್.ರವರೆಗೆ ಅಧಿವೇಶನ ನಡೆಯಲಿದ್ದು, 24ಕ್ಕೂ ಹೆಚ್ಚು ಮಸೂದೆಗಳಿಗೆ ಸರ್ಕಾರ ಅಂಗೀಕಾರ ಪಡೆದುಕೊಳ್ಳುವ ಸಾಧ್ಯತೆಯಿದೆ.
ಮೊದಲ ದಿನದ ಅಧಿವೇಶನವಾದ ಇಂದು ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಹಾಗೂ ಅಹಮದಾಬಾದ್ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಲಾಯಿತು.
ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳು ಕಾರ್ಯತಂತ್ರ ರೂಪಿಸಿದ್ದು, ಇದೆಲ್ಲವನ್ನು ಎದುರಿಸಲು ಆಡಳಿತ ಪಕ್ಷ ಕೂಡ ತಯಾರಿ ನಡೆಸಿದೆ.
ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ, ಅತಿವೃಷ್ಟಿ, ಅನಾವೃಷ್ಟಿ, ಪ್ರವಾಹ, ರಸಗೊಬ್ಬರದ ಅಭಾವ, ಒಳ ಮೀಸಲಾತಿ, ಮತಗಳ್ಳತನದ ಆರೋಪ ಸೇರಿದಂತೆ ಹಲವು ವಿಚಾರಗಳು ಅಧಿವೇಶನದಲ್ಲಿ ಪ್ರತಿಧ್ವನಿಸಲಿವೆ.
ಇನ್ನು ಅಧಿವೇಶನಕ್ಕೂ ಮುಂಚೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿದರು.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಜಮಾಯಿಸಿದ ನಾಯಕರು, ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…