ಬೆಂಗಳೂರು: ಜುಲೈ.14ರಿಂದ ವಿಧಾನಸಭೆ ಮುಂಗಾರು ಅಧಿವೇಶನ ಆರಂಭವಾಗುವ ಸಾಧ್ಯತೆಗಳಿದ್ದು, ಈ ನಡುವಲ್ಲೇ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಹಾಗೂ ಜಾತಿಗಣತಿ ಮರು ಸಮೀಕ್ಷೆ ವಿಚಾರ ಹಿಡಿದು ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ.
ಅಧಿವೇಶನಕ್ಕೆ ಬಿಜೆಪಿ ಸಜ್ಜಾಗುತ್ತಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಹಾಗೂ ರಾಜ್ಯಪಾಲರಿಗೆ ದೂರು ನೀಡಲು ಸಜ್ಜಾಗುತ್ತಿದೆ. ಆರ್‌ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ, ಜಾತಿ ಗಣತಿ ಮರು ಸಮೀಕ್ಷೆ, ಕರಾವಳಿಯಲ್ಲಿ ಕೋಮು ಸಂಘರ್ಷ ವಿಚಾರಗಳ ಕುರಿತು ಧ್ವನಿಯೆತ್ತಲು ಸಿದ್ಧತೆ ನಡೆಸುತ್ತಿದೆ.
ಕಾಂಗ್ರೆಸ್ ಉತ್ತಮ ಆಡಳಿತ ನೀಡುವಲ್ಲಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ಹಿಂದೂ ಕಾರ್ಯಕರ್ತರ ಹತ್ಯೆಗೆ ಕಾರಣವಾದ ಸಮುದಾಯದ ಓಲೈಕೆ ರಾಜಕೀಯದಲ್ಲಿ ತೊಡಗಿದೆ. ಕಾಲ್ತುಳಿತದಿಂದ ಉಂಟಾಗುವ ಸಾವುಗಳು, ಜಾತಿ ಜನಗಣತಿಗೆ ತೆರಿಗೆದಾರರ ಹಣವನ್ನು ವ್ಯರ್ಥ ಮಾಡುವುದು ಮತ್ತು ಇನ್ನೂ ಹಲವು ವಿಷಯಗಳ ಕುರಿತು ಅಧಿವೇಶನದಲ್ಲಿ ಧ್ವನಿ ಎತ್ತುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್, ಗ್ರಾಮ ಪಂಚಾಯತ್ ಚುನಾವಣೆಗಳು ಮತ್ತು ಬಿಬಿಎಂಪಿ ಸೇರಿದಂತೆ ಸ್ಥಳೀಯ ಚುನಾವಣೆಗಳು ಸೇರಿದಂತೆ ಹತ್ತಿರ ಬರುತ್ತಿದ್ದು, ನಮಗೆ ಬಲವಾದ ನಾಯಕತ್ವ ಬೇಕು. ಮುಂದಿನ ವಿಧಾನಸಭಾ ಚುನಾವಣೆಗೂ ಮುನ್ನ ಪಕ್ಷ ಸಂಘಟನೆಯನ್ನು ಬಲಪಡಿಸಬೇಕಾಗಿದೆ ಎಂಬುದು ಬಹುತೇಕರ ಒತ್ತಾಯವಾಗಿದೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…