Mysore
27
clear sky

Social Media

ಗುರುವಾರ, 29 ಜನವರಿ 2026
Light
Dark

ಆಗಸ್ಟ್.‌11ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ

Stop Tug-of-War Over Leadership Debate; Focus on Development Instead

ಬೆಂಗಳೂರು: ವಿಧಾನ ಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್.11ರಿಂದ 22ರವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧ‌ರ್ ಅಧಿಸೂಚನೆ ಹೊರಡಿಸಿದ್ದಾರೆ.

ಆಗಸ್ಟ್.11ರಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಅವರು ಪೂರ್ವಾಹ್ನ 11ಕ್ಕೆ ವಿಧಾನಮಂಡಲದ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ.

ಭಾರತ ಸಂವಿಧಾನದ 174ನೇ ಅನುಚ್ಛೇದದ (1)ನೇ ಖಂಡದ ಮೂಲಕ ನನಗೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ ಥಾವರ್ ಚಂದ್ ಗೆಹ್ಲೋಟ್‌, ಕರ್ನಾಟಕ ರಾಜ್ಯಪಾಲರು ಆದ ನಾನು 2025ರ ಆಗಸ್ಟ್.11ನೇ ದಿನಾಂಕದಂದು ಸೋಮವಾರ ಪೂರ್ವಾಹ್ನ 11ಕ್ಕೆ ಬೆಂಗಳೂರಿನಲ್ಲಿ ಕರ್ನಾಟಕ ವಿಧಾನಮಂಡಲದ ಅಧಿವೇಶನ ಸಮಾವೇಶಗೊಳಿಸಬೇಕೆಂದು ಈ ಮೂಲಕ ಕರೆಯುತ್ತಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.

ಇನ್ನೂ ಕರ್ನಾಟಕ ವಿಧಾನಮಂಡಲದ ಅಧಿವೇಶನದ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ದಿನಾಂಕ 11-08-2025ರ ಸೋಮವಾರ ಸರ್ಕಾರಿ ಕಾರ್ಯಕಲಾಪಗಳು ಎಂಬುದಾಗಿ ತಿಳಿಸಲಾಗಿದೆ.

ಆಗಸ್ಟ್.11ರಿಂದ ಆರಂಭಗೊಂಡು ದಿನಾಂಕ 22-08-2025ರವರೆಗೆ ವಿಧಾನಮಂಡಲದ ಕಲಾಪಗಳು ನಡೆಯಲಿದೆ.

Tags:
error: Content is protected !!