Stop Tug-of-War Over Leadership Debate; Focus on Development Instead
ಬೆಂಗಳೂರು: ವಿಧಾನ ಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್.11ರಿಂದ 22ರವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದಾರೆ.
ಆಗಸ್ಟ್.11ರಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಅವರು ಪೂರ್ವಾಹ್ನ 11ಕ್ಕೆ ವಿಧಾನಮಂಡಲದ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ.
ಭಾರತ ಸಂವಿಧಾನದ 174ನೇ ಅನುಚ್ಛೇದದ (1)ನೇ ಖಂಡದ ಮೂಲಕ ನನಗೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ ಥಾವರ್ ಚಂದ್ ಗೆಹ್ಲೋಟ್, ಕರ್ನಾಟಕ ರಾಜ್ಯಪಾಲರು ಆದ ನಾನು 2025ರ ಆಗಸ್ಟ್.11ನೇ ದಿನಾಂಕದಂದು ಸೋಮವಾರ ಪೂರ್ವಾಹ್ನ 11ಕ್ಕೆ ಬೆಂಗಳೂರಿನಲ್ಲಿ ಕರ್ನಾಟಕ ವಿಧಾನಮಂಡಲದ ಅಧಿವೇಶನ ಸಮಾವೇಶಗೊಳಿಸಬೇಕೆಂದು ಈ ಮೂಲಕ ಕರೆಯುತ್ತಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.
ಇನ್ನೂ ಕರ್ನಾಟಕ ವಿಧಾನಮಂಡಲದ ಅಧಿವೇಶನದ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ದಿನಾಂಕ 11-08-2025ರ ಸೋಮವಾರ ಸರ್ಕಾರಿ ಕಾರ್ಯಕಲಾಪಗಳು ಎಂಬುದಾಗಿ ತಿಳಿಸಲಾಗಿದೆ.
ಆಗಸ್ಟ್.11ರಿಂದ ಆರಂಭಗೊಂಡು ದಿನಾಂಕ 22-08-2025ರವರೆಗೆ ವಿಧಾನಮಂಡಲದ ಕಲಾಪಗಳು ನಡೆಯಲಿದೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…