ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೊಂತಾ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಅಕ್ಟೋಬರ್.29ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ವ್ಯಾಪಕ ಮಳೆಯಾಗುವುದರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಳಗಾವಿ, ಗದಗ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಮೈಸೂರಿನಲ್ಲಿ ಇಂದು ಭಾರೀ ಮಳೆಯಾಗಲಿದೆ.
ಇದನ್ನು ಓದಿ: ಮೊಂತಾ ಚಂಡಮಾರುತ ಎಫೆಕ್ಟ್ : ನಾಲ್ಕು ರಾಜ್ಯಗಳಿಗೆ ಭಾರೀ ಮಳೆಯ ಮುನ್ಸೂಚನೆ
ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿಯಲ್ಲಿ ನಾಳೆ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕಳೆದ 24 ಗಂಟೆ ಅವಧಿಯಲ್ಲಿ ಉತ್ತರ ಕನ್ನಡ, ಯಾದಗಿರಿ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ವಿವಿಧೆಡೆ ಮಳೆಯಾಗಿದೆ. ಚಂಡಮಾರುತದಿಂದ ತಾಪಮಾನ ಕುಸಿತವಾಗಿ ಚಳಿಯ ಅನುಭವವಾಗುತ್ತಿದೆ.
ಇಂದು ಮಧ್ಯಾಹ್ನದ ವೇಳೆಗೆ ಚಂಡಮಾರುತ ಬಲಗೊಳ್ಳುವ ಸಾಧ್ಯತೆಯಿದ್ದು, ಆಂಧ್ರಪ್ರದೇಶ ಕರಾವಳಿ ದಾಟಲಿದೆ.
ಗಂಟೆಗೆ 100 ಕಿ.ಮೀ ವೇಗದವರೆಗೂ ಗಾಳಿ ಬೀಸಲಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…