ರಾಜ್ಯ

ಬೌದ್ಧ ಬಿಕ್ಕುಗಳಿಗೆ ಶೀಘ್ರದಲ್ಲೇ ಮಾಸಿಕ ಸಂಭಾವನೆ : ಸರ್ಕಾರ ಘೋಷಣೆ

ಬೆಳಗಾವಿ : ರಾಜ್ಯದಲ್ಲಿರುವ ಬುದ್ಧವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆಯನ್ನು ಶೀಘ್ರದಲ್ಲಿ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ.

ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ವಸತಿ, ವಕ್ಸ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರ ಪರವಾಗಿ ಅವರು ಉತ್ತರಿಸಿದರು.

ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ರಾಜ್ಯದ ನೋಂದಾಯಿತ ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಹಾಗೂ ರಾಜ್ಯದ ವಕ್ಸ್ ನೊಂದಾಯಿತ ಮಸೀದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೇಶ್ ಇಮಾಮ್ ಮತ್ತು ಮುಯೀಜ್ಜನ್ ಗಳಿಗೆ ಮಾಸಿಕ ಗೌರವಧನ ನೀಡಲಾಗುತ್ತಿದೆ. ಅದರಂತೆ ಬೌದ್ಧ ಬಿಕ್ಕುಗಳಿಗೂ ಪ್ರಾರಂಭಿಸಲಾಗುವುದು ಎಂದು ಘೋಷಣೆ ಮಾಡಿದರು.

ಇದನ್ನೂ ಓದಿ:-ಮಂಡ್ಯ | SSLC ಫಲಿತಾಂಶ ಹೆಚ್ಚಳಕ್ಕೆ ಅಗತ್ಯ ಕ್ರಮ : ಜಿ.ಪಂ.ಸಿಇಓ ನಂದಿನಿ

ಈ ವೇಳೆ ಕೆ.ಶಿವಕುಮಾರ್ ಅವರು ಮಾತನಾಡಿ, ರಾಜ್ಯದಲ್ಲಿ 80ಕ್ಕೂ ಹೆಚ್ಚು ಬುದ್ಧವಿಹಾರಗಳಿದ್ದು, 200ಕ್ಕೂ ಹೆಚ್ಚು ಬೌದ್ಧ ಬಿಕ್ಕುಗಳು ಸೇವೆ ಸಲ್ಲಿಸುತ್ತಿದ್ದಾರೆ. ದಾನಿಗಳ ನೆರವಿನಿಂದ ನಿರ್ಮಾಣ ಮಾಡಿರುವ ಬುದ್ಧವಿಹಾರಗಳ ನಿರ್ವಹಣೆ ಕಷ್ಟಕರವಾಗಿದೆ. ಸರ್ಕಾರದಿಂದ ಸಹಾಯಧನ ದೊರಕುತ್ತಿಲ್ಲ. ಈ ಹಿಂದೆ ಇದ್ದಂತಹ ಯಾವುದೇ ಸರ್ಕಾರಗಳು ಕೂಡ ಸಹಾಯಧನ ನೀಡಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಅಭಿಮಾನಿಗಳು ಸೇರಿದಂತೆ ಬೌದ್ಧಧರ್ಮವನ್ನು ಒಪ್ಪಿಕೊಂಡಿರುವ ಬಹಳಷ್ಟು ಅನುಯಾಯಿಗಳು ಸೇರಿ ಬುದ್ಧವಿಹಾರಗಳನ್ನು ನಿರ್ಮಿಸಿದ್ದಾರೆ. ಇವುಗಳನ್ನು ಸ್ಥಳೀಯ ಸಂಸ್ಥೆಗಳು ನಿರ್ವಹಣೆ ಮಾಡಬೇಕು. ಜೊತೆಗೆ ಬೌದ್ಧ ಬಿಕ್ಕುಗಳು ಹಾಗೂ ಅವರ ಸಹಾಯಕರಿಗೆ ಸರ್ಕಾರದಿಂದ ಸಹಾಯಧನ ನೀಡವುದರಿಂದ ಬುದ್ಧವಿಹಾರ ನಡೆಸಲು ಸಹಕಾರಿಯಾಗಲಿದೆ ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

5 mins ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

17 mins ago

ರೈತರ ಅಭ್ಯುದಯಕ್ಕೆ ಸರ್ಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ.

ಚಿತ್ತಾಪುರ: ಕಾಂಗ್ರೆಸ್ ಸರ್ಕಾರ ರೈತರ ಅಭ್ಯುದಯಕ್ಕೆ ಶ್ರಮಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನುಡಿದರು.…

25 mins ago

ರಾಜ್ಯಸಭೆ ಸದಸ್ಯರಾಗಿ ನಾಳೆ ನಿತೀಶ್‌ ಕುಮಾರ್‌ ಪ್ರಮಾಣ ವಚನ ಸ್ವೀಕಾರ

ಪಾಟ್ನಾ: ಮುಂದಿನ ವಾರ ಬಿಹಾರಕ್ಕೆ ಹೊಸ ಮುಖ್ಯಮಂತ್ರಿ ಆಯ್ಕೆಯಾಗುವ ಸಾಧ್ಯತೆ ಇದ್ದು, ನಾಳೆ ನಿತೀಶ್ ಕುಮಾರ್ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣವಚನ…

34 mins ago

ದಾವಣಗೆರೆ ದಕ್ಷಿಣದಲ್ಲಿ ಶೇ.50, ಬಾಗಲಕೋಟೆಯಲ್ಲಿ ಶೇ.54ರಷ್ಟು ಮತದಾನ

ಬೆಂಗಳೂರು: ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಸಂಜೆ 4.30ರ ವೇಳೆಗೆ ಬಾಗಲಕೋಟೆಯಲ್ಲಿ ಶೇ.54.82 ಹಾಗೂ ದಾವಣಗೆರೆ…

39 mins ago

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ…

59 mins ago