Mysore
15
broken clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

‘ಬಿಜೆಪಿ-ಜೆಡಿಎಸ್ ಮೈತ್ರಿ ವಿರೋಧಿಸಿ’ ಮತ್ತಷ್ಟು ಮಂದಿ ಕಾಂಗ್ರೆಸ್ ಸೇರಲಿದ್ದಾರೆ: ಡಿ.ಕೆ.ಶಿವಕುಮಾರ್

ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿರೋಧಿಸಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಮಂದಿಗೆ ಸೇರಲಿದ್ದು, ಹಳಬರು ಹೊಸಬರು ಎಂಬ ಬೇಧವಿಲ್ಲದೆ ಶ್ರಮಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಶುಕ್ರವಾರ ಕೆಪಿಸಿಸಿಯ ಇಂದಿರಾ ಭವನದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸೇರುವವರ ದೊಡ್ಡ ಪಟ್ಟಿ ಇದೆ. ಅದನ್ನು ಈಗ ಬಹಿರಂಗಪಡಿಸುವುದಿಲ್ಲ. ಒಬ್ಬೊಬ್ಬರನ್ನೆ ಪಕ್ಷಕ್ಕೆ ಸೇರಿಸಿಕೊಳ್ಳುವ ಕೆಲಸ ಮಾಡುತ್ತೇವೆ. ಈ ಪ್ರಕ್ರಿಯೆ ಇಲ್ಲಿಗೆ ನಿಲ್ಲಬಾರದು. ಪ್ರತಿ ಬೂತ್ ಹಾಗೂ ಹಳ್ಳಿಗಳಲ್ಲಿ ಇದೇ ರೀತಿ ಕಾರ್ಯಕ್ರಮಗಳನ್ನು ಮಾಡಿ ಅಲ್ಲಿನ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಕರ್ನಾಟಕ ಹಾಗೂ ಹಿಮಾಚಲ ಪ್ರದೇಶದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ. ರಾಹುಲ್ ಗಾಂಧಿ ಅವರು ದೇಶದುದ್ದಗಲ ಭಾರತ ಜೋಡೋ ಯಾತ್ರೆ ಮಾಡಿ ದೇಶದ ಮನಸ್ಸುಗಳನ್ನು ಒಂದುಗೂಡಿಸಿದ್ದಾರೆ. ಈಗ ದೇಶದಲ್ಲಿ ಇಂಡಿಯಾ ಒಕ್ಕೂಟ ರೂಪುಗೊಂಡಿದ್ದು, ಇದಕ್ಕೆ ಎಲ್ಲರೂ ಸೇರಿ ಶಕ್ತಿ ತುಂಬಬೇಕು ಎಂದು ಹೇಳಿದರು.

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿರೋಧಿಸಿ ಕಾಂಗ್ರೆಸ್ ಸೇರುವವರ ಸಂಖ್ಯೆ ಹೆಚ್ಚಾಗಿದೆ. ಹಳಬರು ಹೊಸಬರು ಎಂಬ ಬೇಧವಿಲ್ಲದೆ ಶ್ರಮಿಸಬೇಕು. ರಾಜಕೀಯದಲ್ಲಿ ಭಿನ್ನಾಭಿಪ್ರಾಯ ಸಹಜ. ಆದರೆ ಪಕ್ಷದ ಸಿದ್ಧಾಂತಕ್ಕಾಗಿ ಎಲ್ಲಾ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದ ಅವರು, ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ನಡೆದಾಗ ಕನಕಪುರಕ್ಕಿಂತಲೂ ಹಿರಿಯೂರು ಕ್ಷೇತ್ರದಲ್ಲಿ ಹೆಚ್ಚಿನ ಸದಸ್ಯತ್ವ ಮಾಡಲಾಗಿತ್ತು. ಅದಕ್ಕೆ ತಕ್ಕಂತೆ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಮತ ಬಂದಿದ್ದವು. ಈಗ ನಿಮ್ಮ ಸೇರ್ಪಡೆಯಿಂದ ನಮ್ಮ ಶಕ್ತಿ ಮತ್ತಷ್ಟು ಹೆಚ್ಚಾಗಿದೆ ಎಂದು ನುಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!