- ಬೆಂಗಳೂರು :ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಮೂರು ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಮೂರರಿಂದ ನಾಲ್ಕು ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಉದ್ಘಾಟನೆ, ಕೆಂಪೇಗೌಡ ಕಂಚಿನ ಪ್ರತಿಮೆ ಲೋಕಾರ್ಪಣೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ.
ಹೀಗಾಗಿ ಕಾರ್ಯಕ್ರಮ ನಡೆಯುವ ಸ್ಥಳಗಳು ಸೇರಿದಂತೆ ಪ್ರಧಾನಿಯ ಸಂಚಾರವಿರುವ ಸ್ಥಳಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ನಗರ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ ಅವರೇ ಭದ್ರತೆಯ ಉಸ್ತುವಾರಿ ವಹಿಸಿದ್ದಾರೆ. ಇವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಸುಬ್ರಹ್ಮಣ್ಯೇಶ್ವರ ರಾವ್, ಜಂಟಿ ಪೊಲೀಸ್ ಆಯುಕ್ತ ಡಾ. ಬಿ.ಆರ್.ರವಿಕಾಂತೇಗೌಡ, ರಮಣಗುಪ್ತ ಸೇರಿದಂತೆ ಐವರು ಡಿಸಿಪಿಗಳು ಭದ್ರತೆ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಸುಗಮ ಸಂಚಾರ ಹಾಗೂ ಭದ್ರತೆ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ 8ರಿಂದ ಮಧ್ಯಾಹ್ನ 2ರವರೆಗೆ ಪ್ರಧಾನಿ ಮೋದಿ ಅವರ ಸಂಚಾರವಿರುವ ಮಾರ್ಗಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.