ಹಾಸನ: ಅಕ್ರಮ ಗೋಮಾಂಸ ಮಾರಾಟಕ್ಕಾಗಿ 60ಕ್ಕೂ ಹೆಚ್ಚು ಜಾನುವಾರುಗಳನ್ನು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಾಗೂರು ರಸ್ತೆ ಬಳಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ಈ ಹತ್ಯೆ ನಡೆದಿರುವುದು ಪತ್ತೆಯಾಗಿದೆ.
ಗೋವುಗಳ ಹತ್ಯೆಯ ವಿಷಯ ತಿಳಿಯುತ್ತಿದ್ದಂತೆ ಮಧ್ಯರಾತ್ರಿ ಸುಮಾರು 12.30ರ ಸಮಯಕ್ಕೆ ಪೊಲೀಸರು ಸ್ಥಳಕ್ಕೆ ಬಂದು ದಾಳಿ ನಡೆಸಿದ್ದಾರೆ. ಅಷ್ಟರಲ್ಲೇ ಕರುಗಳು ಸೇರಿದಂತೆ 60ಕ್ಕೂ ಹೆಚ್ಚು ಜಾನುವಾರುಗಳನ್ನು ಹತ್ಯೆ ಮಾಡಿ ರುಂಡಗಳನ್ನು ಬೇರ್ಪಡಿಸಿ, ಕೈಕಾಲುಗಳನ್ನು ಕತ್ತರಿಸಿ ಚರ್ಮ ಸುಲಿದು ನೇತುಹಾಕಲಾಗಿತ್ತು. ದಾಳಿಯಲ್ಲಿ ಐದು ಗೋವುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದು, ಸಾವಿರಕ್ಕೂ ಹೆಚ್ಚು ಕೆಜಿ ಗೋಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.