ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದು, ಸಿದ್ದರಾಮಯ್ಯ ಕರ್ನಾಟಕದ ಜನರ ಜೀವನವನ್ನು ನರಕ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.
ರೇಷನ್ ಕಾರ್ಡ್ ರದ್ದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಲಮ್‌ನಲ್ಲಿ ವಾಸಿಸಲು ಆಗದ ರೀತಿಯಲ್ಲಿ ಜನರು ವಾಸವಾಗಿದ್ದಾರೆ. ಅಂತಹವರ ಬಿಪಿಎಲ್ ಕಾರ್ಡ್ ರದ್ದಾಗಿದೆ. ಪ್ರಶ್ನೆ ಮಾಡಿದರೆ ಅವರು ತೆರಿಗೆ ಕಟ್ಟುವವರು ಎಂದು ಹೇಳುತ್ತಾರೆ. ಅವರೆಲ್ಲಾ ತೆರಿಗೆ ಕಟ್ಟುತ್ತಾರಾ ಎಂದು ಪ್ರಶ್ನಿಸಿದರು.
ಇನ್ನು ಬಿಪಿಎಲ್ ಕಾರ್ಡ್ ರದ್ದಾದರೆ ಅಕ್ಕಿ ಮಾತ್ರ ರದ್ದಾಗಲ್ಲ. ಔಷಧಿ, ಆಸ್ಪತ್ರೆ, ಸೌಲಭ್ಯ ಎಲ್ಲವೂ ಸ್ಥಗಿತಗೊಳ್ಳುತ್ತದೆ. ಬಡ ಜನರ ಕಷ್ಟ ಅವರಿಗೆ ಅರ್ಥ ಆಗುತ್ತಿಲ್ಲ. ಇದು ಯೂಟರ್ನ್ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.





