ಹುಬ್ಬಳ್ಳಿ: ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಅದಕ್ಕಾಗಿಯೇ ಎಲ್ಲಾ ದರಗಳನ್ನು ಏರಿಕೆ ಮಾಡಲಾಗುತ್ತಿದೆ. ಮೆಟ್ರೋ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮಿತಿ ಇದೆ. ಮೆಟ್ರೋ ದರ ಏರಿಕೆ ವಿಚಾರದಲ್ಲಿ ಎಲ್ಲಾ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯದ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ. ಸಿಎಂ ದರ ಏರಿಕೆ ವಿಚಾರವಾಗಿ ನಿರ್ದೇಶನ ಕೊಟ್ಟಿರುವುದು ಅದಕ್ಕೆ ಸಾಕ್ಷಿ ಎಂದು ಹೇಳಿದರು.
ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲಾ ದರ ಏರಿಕೆ ಮಾಡುತ್ತಿದೆ. ವಿದ್ಯುತ್, ನೀರು, ಹಾಲಿನ ದರ ಸೇರಿದಂತೆ ಎಲ್ಲಾ ದರವನ್ನು ಏರಿಸಿದೆ. ಸರ್ಕಾರ ಹಣಕಾಸಿನ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದರು.
ಇನ್ನು ಮೈಸೂರಿನ ಉದಯಗರಿ ಗಲಾಟೆ ವಿಚಾರವಾಗಿ ಮಾತನಾಡಿದ ಅವರು, ಪೊಲೀಸ್ ಠಾಣೆ ಮೇಲೆ ದಾಳಿ ಮಾಡುವುದರ ಹಿಂದೆ ಯಾರ ಕುಮ್ಮಕ್ಕು ಇದೆ ಎನ್ನುವುದು ಗೊತ್ತಾಗುತ್ತದೆ. ಈ ಹಿಂದೆ ತನ್ವೀರ್ ಸೇಠ್ ಮೇಲೆ ಪಿಎಫ್‌ಐ ದಾಳಿ ಮಾಡಿತ್ತು. ಇಂದು ಆ ಶಕ್ತಿಗಳು ಮತ್ತೆ ಒಂದಾಗಿವೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವವರೇ ಆತಂಕದಲ್ಲಿದ್ದಾರೆ ಎಂದು ರಾಜ್ಯ ಸರ್ಕಾರದ ಆಡಳಿತದ ವಿರುದ್ಧ ಕಿಡಿಕಾರಿದರು.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…