ಬೆಂಗಳೂರು: ಬೆಂಗಳೂರಿನ ನಿಮ್ಹಾನ್ಸ್ ಕ್ಯಾಂಪಸ್‌ನಲ್ಲಿ ಸುಮಾರು 300 ಹಾಸಿಗೆಗಳ ಪಾಲಿಟ್ರಾಮಾ ಕೇಂದ್ರ ಸ್ಥಾಪಿಸಲು ಒಪ್ಪಿಗೆ ನೀಡಬೇಕು ಎಂದು ಸಂಸದ ಡಾ.ಸಿಎನ್ ಮಂಜುನಾಥ್ ಅವರು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಮನವಿ ಸಲ್ಲಿಸಿದ್ದಾರೆ.
ನಿಮ್ಹಾನ್ಸ್ ಆಸ್ಪತ್ರೆ ಆರಂಭವಾದಾಗ ಪ್ರತಿದಿನ 250 ರಿಂದ 300ರ ಹತ್ತಿರ ರೋಗಿಗಳು ಬರುತ್ತಿದ್ದರು. ಈಗ ಅದರ ಸಂಖ್ಯೆ 2500ಕ್ಕಿಂತಲೂ ಹೆಚ್ಚಾಗಿದೆ. ಆದ ಕಾರಣ ಪಾಲಿಟ್ರಾಮಾ ಕೇಂದ್ರ ನಿರ್ಮಾಣಕ್ಕೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ದೇಶದಲ್ಲಿ ಸಾವುಗಳು ಹೆಚ್ಚಾಗಿ ಸಂಭವಿಸುವ ಅಪಘಾತಗಳಲ್ಲಿ ರಸ್ತೆ ಅಪಘಾತವು ಒಂದಾಗಿದೆ. ರಸ್ತೆ ಅಪಘಾತಗಳಿಂದ ಸಾವಿಗೀಡಾಗುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದೇಶದಲ್ಲಾಗುತ್ತಿರುವ ಸಾವುಗಳಿಗೆ ರಸ್ತೆ ಅಪಘಾತ ದೇಶದ ಅತಿದೊಡ್ಡ ಐದನೇ ಕಾರಣವಾಗಿದೆ.
ಅಪಘಾತದಲ್ಲಿ ಗಾಯವಾದವರಿಗೆ ಗೋಲ್ಡನ್ ಅವರ್‌ನಲ್ಲಿ ಚಿಕಿತ್ಸೆ ನೀಡದಿದ್ದರೆ ಸಾವು ಸಂಭವಿಸುವ ಅವಕಾಶ ಜಾಸ್ತಿಯಿರುತ್ತದೆ. ಈಗ ಪಾಲಿಟ್ರಾಮಾ ಕೇಂದ್ರವಿಲ್ಲದೆ ಹಲವು ರೋಗಿಗಳನ್ನು ಬೇರೆ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಪಾಲಿಟ್ರಾಮಾ ಕೇಂದ್ರ ಸ್ಥಾಪನೆಗೆ ಅನುಮೋದನೆ ನೀಡಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರವು ಈಗಾಗಲೇ ಭೂಮಿ ಮಂಜೂರು ಮಾಡಿದೆ. ಹಲವು ಭಾರಿ ಪಾಲಿಟ್ರಾಮಾ ಕೇಂದ್ರದ ವಿನ್ಯಾಸ ಕುರಿತಂತೆ ನೀಡಿರುವ ಪ್ರಸ್ತಾಪವನ್ನೂ ಪರಿಷ್ಕರಿಸಲಾಗಿದೆ. ಇದಕ್ಕೆ ಆಡಳಿತ ಮಂಡಳಿಯೂ ಒಪ್ಪಿಗೆ ನೀಡಿದೆ ಎಂದು ಮನವರಿಕೆ ಮಾಡಿದರು.
ನನ್ನ ಈ ಪ್ರಸ್ತಾವನೆಗೆ ಕೇಂದ್ರ ಸರ್ಕಾರದ ಸಚಿವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದರು ತಿಳಿಸಿದರು.
ಚಾ.ನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಮಾಡಲಿರುವ ವಾಹನಗಳು ಚಾಮರಾಜನಗರ : ಧಮ್ಮ ಪಯಣ ಜಾಗೃತಿ ಜಾಥಾದ…
ಮೈಸೂರು ದಸರಾ ಎಂದರೆ ಜಂಬೂಸವಾರಿ, ಅರಮನೆಯ ದೀಪಾಲಂಕಾರ, ಸಂಗೀತ-ನೃತ್ಯ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ವಸ್ತುಪ್ರದರ್ಶನ ಮಾತ್ರವಲ್ಲ. ಕಳೆದ…
ಕೆ. ಬಿ. ರಮೇಶನಾಯಕ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿರುವ ಗಜಪಡೆಯ ಹೊಸ ಸಾರಥಿಯ ಆಯ್ಕೆಗಾಗಿ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…
ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…