ಚಿಕ್ಕಬಳ್ಳಾಪುರ: ಒಕ್ಕಲಿಗ ಸ್ವಾಮೀಜಿ ಚಂದ್ರಶೇಖರನಾಥ ಶ್ರೀಗಳ ಮೇಲೆ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಕ್ ಸ್ವತಂತ್ರ, ಪ್ರಜಾ ಪ್ರಭುತ್ವ ಅಂತ ಕಾಂಗ್ರೆಸ್ ಸರ್ಕಾರ ಭಾಷಣ ಮಾಡುತ್ತದೆ. ಆದರೆ ಜನರ ಹಾಗೂ ಸ್ವಾಮೀಜಿಗಳ ಅಭಿಪ್ರಾಯಕ್ಕೆ ಕಾನೂನಿನ ಕೊಕ್ಕೆ ಹಾಕುತ್ತಿದೆ ಎಂದು ಕಿಡಿಕಾರಿದರು.
ಭಾರತದ ಸಂವಿಧಾನದಲ್ಲಿ ವಾಕ್ ಸ್ವತಂತ್ರ ಮೂಲಭೂತ ಹಕ್ಕಾಗಿದೆ. ಒಬ್ಬೊಬ್ಬರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಕಾನೂನಿನಲ್ಲಿ ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಆ ಹೇಳಿಕೆಗಳು ತಪ್ಪು ಅಥವಾ ಸರಿ ಎಂದು ನಾನು ವಿಶ್ಲೇಷಣೆ ಮಾಡುವುದಿಲ್ಲ ಎಂದು ಹೇಳಿದರು.
ಮುಂದುವರಿದು ಮಾತನಾಡಿದ ಅವರು, ಚುನಾವಣೆ ಸಂದರ್ಭಗಳಲ್ಲಿ ಸ್ವಾಮೀಜಿಗಳು, ಸಾಧು ಸಂತರ ಪಾದಕ್ಕೆ ಬೀಳ್ತೀರಾ. ಆದರೆ ಅವರು ತಮ್ಮ ಅಭಿಪ್ರಾಯವನ್ನು ಹೇಳಿದರೆ ಅವರ ವಿರುದ್ಧವೇ ಎಫ್‌ಐಆರ್ ಹಾಕಿ ಅವರನ್ನು ಜೈಲಿಗೆ ಕಳುಹಿಸುತ್ತೀರಾ ಎಂದು ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…
ನವದೆಹಲಿ: ಬಾಬಾಸಾಹೇಬ್ ಅಂಬೇಡ್ಕರ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…
ತುಮಕೂರು: 70 ಲಕ್ಷ ಕರೆಂಟ್ ಬಿಲ್ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…
ಹೈದರಾಬಾದ್: ಟಾಲಿವುಡ್ ಚಲನಚಿತ್ರ ಬಳಗಂ ಮೂಲಕ ಪ್ರಖ್ಯಾತಿ ಗಳಿಸಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗಿಲಯ್ಯ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.…
ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತಂತೆ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿ ಸಿಎಂ…