ಹುಬ್ಬಳ್ಳಿ: ಡಿ.ಕೆ.ಶಿವಕುಮಾರ್ ನಿಮ್ಮ ತತ್ವದ ವಿರುದ್ಧ ಇದ್ದರೆ ಅವರನ್ನು ಸಸ್ಪೆಂಡ್ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಸಂಸದ ಜಗದೀಶ್ ಶೆಟ್ಟರ್ ಟಾಂಗ್ ಕೊಟ್ಟಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಕುಂಭಮೇಳಕ್ಕೆ ಹೋಗಿರುವುದರಲ್ಲಿ ತಪ್ಪೇನಿದೆ. ಇದರಲ್ಲಿ ದೊಡ್ಡಸ್ಥಿಕೆ ಏನಿಲ್ಲ. ಇದು ಸರಿ ಆಗಲ್ಲ ಅಂದ್ರೆ, ನಿಮ್ಮ ಪಕ್ಷದ ತತ್ವ ಸಿದ್ದಾಂತಕ್ಕೆ ವಿರೋಧವಾಗಿದ್ರೆ ಅವರನ್ನು ಸಸ್ಪೆಂಡ್ ಮಾಡಿ ಎಂದು ಆಗ್ರಹಿಸಿದರು.
ಇನ್ನು ಕಾಂಗ್ರೆಸ್‌ಗೆ ಹಿಂದುಗಳ ಬಗ್ಗೆ ದ್ವೇಷ ಇದೆ. ಇದರಿಂದ ಕಾಂಗ್ರೆಸ್ ಉದ್ಧಾರ ಆಗಲ್ಲ. ಹಿಂದೂಗಳಿಲ್ಲದೇ ನೀವು ರಾಜಕಾರಣ ಮಾಡ್ತೀವಿ ಅಂದ್ರೆ ಅದು ನಿಮ್ಮ ಹಣೆಬರಹ. ಹಿಂದೂಗಳನ್ನು ಕೀಳಾಗಿ ಕಾಣೋದೆ, ಅವರ ಅವನತಿಗೆ ಕಾರಣ ಎಂದಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಹಿಂದೂ ವಿರೋಧಿಯಾಗಿದೆ. ಈ ದೇಶ ಹಿಂದೂಗಳ ದೇಶ, ಹಿಂದೂ ರಾಷ್ಟ್ರ ಎನ್ನುವ ಪರಂಪರೆ ಇದೆ. ಕಮ್ಯುನಿಷ್ಟರು ಕೂಡ ಹಿಂದೂ ದೇವಾಲಯಕ್ಕೆ ಹೋಗಿದ್ದಾರೆ. ಕಾಂಗ್ರೆಸ್‌ನವರು ಎಷ್ಟೋ ಜನ ಕುಂಭಮೇಳಕ್ಕೆ ಹೋಗಿದ್ದಾರೆ ಎಂದರು.
ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ (WPL) ಟಿ20 ಕ್ರಿಕೆಟ್ ಟೂನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್…
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧಿಯಾಗಿದ್ದು ನಟಿ ರನ್ಯಾರಾವ್ ಅವರು 2023ರ ಜೂನ್‌ನಿಂದ ಇಲ್ಲಿಯವರೆಗೂ 52 ಬಾರಿ ದುಬೈಗೆ ಹೋಗಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಸಭ್ಯತೆ ಮೀರಿ ನಡೆದುಕೊಳ್ಳಬಾರದು ಎಂದು ಶಾಸಕ ತನ್ವೀರ್ ಸೇಠ್ ಸಲಹೆ ನೀಡಿದ್ದಾರೆ. ರಾಜ್ಯ…
ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ಸುತ್ತ-ಮುತ್ತ ಜನರಿಗೆ ಹಾವಳಿ ನೀಡುತ್ತಿರುವ 3 ಪುಂಡಾನೆಗಳನ್ನು ಪತ್ತೆಹಚ್ಚಲಾಗಿದೆ.…
ಚಾಮರಾಜನಗರ: ಬೀದಿ ನಾಯಿ ದಾಳಿಗೆ ಜಿಂಕೆ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕಾಳನಹುಂಡಿ ಗ್ರಾಮದ ಆಂಜನೇಯ ಸ್ವಾಮಿ…
ಮೈಸೂರು: ನನಗೆ ಸಿಎಂ ಹುದ್ದೆ ಕೊಟ್ಟರೆ ಜವಾಬ್ದಾರಿಯಿಂದ ನಿರ್ವಹಿಸುತ್ತೇನೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಬಗ್ಗೆ…