ರಾಜ್ಯ

ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ನಟಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಂಪೂರ್ಣ ವಿಫಲವಾಗಿದೆ. ಹಾಗಾಗಿ ಈ ಪ್ರಕರಣವನ್ನು ಮುಲಾಜಿಲ್ಲದೇ ಸಿಬಿಐ ತನಿಖೆಗೆ ವಹಿಸಬೇಕು ಎಂದು ಸಂಸದ ಪ್ರಹ್ಲಾದ್‌ ಜೋಶಿ ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು(ಮಾರ್ಚ್.‌13) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಯಾರನ್ನೋ ರಕ್ಷಿಸಲು ಹೋಗಿ ಸರ್ಕಾರ ಗೊಂದಲಕ್ಕೆ ಸಿಲುಕಿದೆ. ಕೇಸ್ ಅನ್ನು ಸರ್ಕಾರ ನಿರ್ವಹಿಸುತ್ತಿರುವ ರೀತಿ ನೋಡಿದರೇ ಸರ್ಕಾರ ವಿಫಲವಾಗಿದೆ ಎಂಬುದು ಎದ್ದು ಕಾಣುತ್ತದೆ. ಅಲ್ಲದೇ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಒತ್ತಡಕ್ಕೆ ಮಣಿದು ಹೇಳಿಕೆಗಳನ್ನು ನೀಡಬಾರದು. ಹೀಗಾಗಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್‌ ಸರ್ಕಾರದ ನಾಯಕರು ಈ ಬಗ್ಗೆ ಒಬ್ಬೊಬರೂ ಒಂದೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇನ್ನು ಗೋಲ್ಡ್‌ ಸ್ಮಗ್ಲಿಂಗ್‌ ಸಂಬಂಧ ಮಾಧ್ಯಮಗಳಲ್ಲಿ ಕೆಲವರ ಹೆಸರು, ಸಚಿವರ ಕೈವಾಡ ಹಾಗೂ ರಾಜಕಾರಣಿಗಳ ಬಗ್ಗೆ ವರದಿ ಬರುತ್ತಿದೆ. ಹಾಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದರು.

ಇದೇ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನ ನೇಮಿಸಿ ಅವರಿಗೆ ಸರ್ಕಾರಿ ವೇತನ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರ ಕಾರ್ಯಕರ್ತರಿಗೆ ಸರ್ಕಾರಿ ವೇತನ ನೀಡುವ ಮೂಲಕ ಹಗಲು ದರೋಡೆ ಮಾಡಿ, ರಾಜ್ಯದ ಜನತೆಗೆ ದ್ರೋಹ ಬಗೆಯುತ್ತಿದೆ. ಅಲ್ಲದೇ ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಗೇನು ಕೆಲಸ? ಮಂತ್ರಿಗಳು ಮತ್ತು ಅಧಿಕಾರಿಗಳು ಕತ್ತೆ ಕಾಯುತ್ತಿದ್ದಾರಾ? ಎಂದು ಪ್ರಶ್ನಿಸಿದರು.

ಅರ್ಚನ ಎಸ್‌ ಎಸ್

Recent Posts

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

21 mins ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

34 mins ago

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

1 hour ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

2 hours ago

ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್‌ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…

2 hours ago

ರಾಜ್ಯದಲ್ಲಿ ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ 5000 ದಂಡ, 3 ವರ್ಷ ಜೈಲು ಶಿಕ್ಷೆ

ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್‌ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…

3 hours ago