ರಾಜ್ಯ

ಗಾಲಿ ಜನಾರ್ದನರೆಡ್ಡಿ ವಿರುದ್ಧ ದೂರು ದಾಖಲಿಸಿದ ಸಂಸದ ಶಶಿಕಾಂತ ಸೆಂಥಿಲ್‌

ಬೆಂಗಳೂರು : ಧರ್ಮಸ್ಥಳದ ವಿಚಾರವಾಗಿ ತಮ್ಮ ವಿರುದ್ಧ ಆರೋಪ ಮಾಡಿರುವ ಶಾಸಕ ಗಾಲಿ ಜನಾರ್ದನರೆಡ್ಡಿ ವಿರುದ್ಧ ತಮಿಳುನಾಡಿನ ತಿರುವಳ್ಳೂರ್ ಕ್ಷೇತ್ರದ ಸಂಸದ ಶಶಿಕಾಂತ್ ಸೆಂಥಿಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಬೆಂಗಳೂರಿಗೆ ಆಗಮಿಸಿದ ಅವರು, ನ್ಯಾಯಾಲಯಕ್ಕೆ ಖಾಸಗಿ ದೂರಿನ ಮೂಲಕ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ತಮ್ಮ ವಿರುದ್ಧ ಮಾಡಿರುವ ಆರೋಪಕ್ಕೆ ಸಾಕ್ಷ್ಯ ಒದಗಿಸುವಂತೆ ಜನಾರ್ದನ ರೆಡ್ಡಿಗೆ ಒತ್ತಾಯಿಸಿದ್ದಾರೆ.

ಇದನ್ನು ಓದಿ:ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಧರ್ಮಸ್ಥಳ ಚಲೋ ಮಾಡ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಗಾವತಿ ಶಾಸಕರಾಗಿರುವ ಗಾಲಿ ಜನಾರ್ದನರೆಡ್ಡಿ ತಮ್ಮ ವಿರುದ್ಧ ಮಾಡಿರುವ ಆರೋಪಗಳು ಬಾಲಿಶತನದಿಂದ ಕೂಡಿವೆ. ಅವುಗಳಿಗೆ ಪ್ರತಿಕ್ರಿಯಿಸುವ ಅಗತ್ಯ ಇಲ್ಲ ಎಂದು ನಾನು ನಿರ್ಲಕ್ಷಿಸಿದ್ದೆ. ಜೊತೆಗೆ ಸಂಸದನಾದ ನನಗೆ ಇಂತಹ ವಿಚಾರಗಳಿಗಿಂತಲೂ ಬೇರೆ ಮಹತ್ವದ ವಿಷಯಗಳಿದ್ದವು ಎಂದಿದ್ದಾರೆ.

ಧರ್ಮಸ್ಥಳದ ವಿಚಾರವಾಗಿ ವಾಟ್ಸ್‌ಪ್ ನೋಡಿಕೊಂಡು ಜನಾರ್ದನರೆಡ್ಡಿ ಮಾತನಾಡಿದಂತಿದೆ. ನನ್ನನ್ನು ಮಾಸ್ಟರ್ ಮೈಂಡ್, ಸ್ಕ್ರಿಪ್ಟ್ ರೈಟರ್ ಎಂದೆಲ್ಲಾ ಬಿಂಬಿಸಿದ್ದಾರೆ. ಅವರ ಹೇಳಿಕೆಯ ಬಳಿಕ ದಿನಕ್ಕೊಂದು ವರದಿ ಬಿತ್ತರವಾಗುತ್ತಿದ್ದು, ನನ್ನ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನಗಳಾಗುತ್ತಿವೆ. ಈ ಹಂತದಲ್ಲಿ ಪ್ರತಿಕ್ರಿಯಿಸಲೇಬೇಕಾಗಿರುವುದು ಅನಿವಾರ್ಯವಾಗಲಿದೆ ಎಂದು ಹೇಳಿದರು.‌

ಕರ್ನಾಟಕ ನನಗೆ ಹೊಸದಲ್ಲ. ಐಎಎಸ್ ಅಧಿಕಾರಿಯಾಗಿ ಇಲ್ಲಿ 10 ವರ್ಷ ಕೆಲಸ ಮಾಡಿದ್ದೇನೆ. ನನ್ನ ಬಗ್ಗೆ ಎಲ್ಲರಿಗೂ ಅರಿವಿದೆ. ತಮ್ಮ ವಿರುದ್ಧ ಆರೋಪ ಮಾಡಿರುವ ಜನಾರ್ದನರೆಡ್ಡಿ ಎಂತಹ ವ್ಯಕ್ತಿ ಎಂದು ಎಲ್ಲರಿಗೂ ಗೊತ್ತಿದೆ. ರಾಜ್ಯದ ಸಂಪತ್ತನ್ನು ಲೂಟಿ ಮಾಡಿದ ಆರೋಪಕ್ಕಾಗಿ 7 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಕರ್ನಾಟಕದ ಹೆಸರನ್ನು ಇಡೀ ದೇಶದಲ್ಲಿ ಕೆಡಿಸಿದ್ದಾರೆ. ಇಂತಹ ವ್ಯಕ್ತಿಯ ಆರೋಪಗಳನ್ನು ಹರಡಲು ಬಿಟ್ಟರೆ ನನಗೂ ಸಮಸ್ಯೆಯಾಗಲಿದೆ, ಸಾರ್ವಜನಿಕ ವಲಯದಲ್ಲೂ ಲೋಪವಾಗುತ್ತದೆ ಎಂದು ಹೇಳಿದರು.

ಅದಕ್ಕಾಗಿ ನಾನು ಖಾಸಗಿ ದೂರು ಸಲ್ಲಿಸುತ್ತಿದ್ದು, ಜನಾರ್ದನರೆಡ್ಡಿ ಅವರು ನ್ಯಾಯಾಲಯಕ್ಕೆ ಬಂದು ತಮ್ಮ ಹೇಳಿಕೆಗಳಿಗೆ ಸಾಕ್ಷ್ಯ ನೀಡಲಿ ಎಂದು ಆಗ್ರಹಿಸಿದರು.

ಇದನ್ನು ಓದಿ:ಮೈಸೂರು: ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ಬಿಜೆಪಿಯಿಂದ ಧರ್ಮಸ್ಥಳ ಚಲೋ

ಧರ್ಮಸ್ಥಳದ ವಿಚಾರದಲ್ಲಿ ವಿಚಾರಣೆಗೊಳಗಾಗುತ್ತಿರುವವರು ದೆಹಲಿಯಲ್ಲಿರುವ ಮನೆಯಲ್ಲಿ ತಮ್ಮನ್ನು ಭೇಟಿ ಮಾಡಿದ್ದರು, ತಲೆ ಬುರುಡೆಯನ್ನು ಸಶಿಕಾಂತ್ ಶೆಂಥಿಲ್ ಅವರೇ ತಂದುಕೊಟ್ಟರು ಎಂದೆಲ್ಲ ಆರೋಪಗಳು ಮಾಡಲಾಗಿದೆ. ಈಗಿನ ಕೇಂದ್ರ ಸರ್ಕಾರ ದೆಹಲಿಯಲ್ಲಿ ನನಗೆ ಈವರೆಗೂ ಒಂದು ಮನೆಯನ್ನು ಕೊಟ್ಟಿಲ್ಲ. ತಮಿಳುನಾಡು ಹೌಸ್‍ನಲ್ಲಿ ವಾಸವಿದ್ದೇನೆ. ತಲೆ ಬುರುಡೆ ಎಲ್ಲಿ ಸಿಗುತ್ತದೆ ಎಂದು ನನಗೆ ಗೊತ್ತಿಲ್ಲ. ಬಹುಶಃ ಜನಾರ್ದನರೆಡ್ಡಿಗೆ ಚೆನ್ನಾಗಿ ಗೊತ್ತಿರಬೇಕು ಎಂದು ತಿರುಗೇಟು ನೀಡಿದ್ದರು.

ಯಾವ ಆರೋಪಿಗಳೂ ನನ್ನ ಸಂಪರ್ಕದಲ್ಲಿ ಇಲ್ಲ. ಜನಾರ್ದನರೆಡ್ಡಿ ಹೇಳಿಕೆಯ ಬಳಿಕ ಮಾಧ್ಯಮಗಳು ನನಗೆ ಕರೆ ಮಾಡಿದಾಗಲಷ್ಟೇ ವಿಷಯ ತಿಳಿಯಿತು ಎಂದು ಸ್ಪಷ್ಟಪಡಿಸಿದರು.

ಇಡೀ ದೇಶದಲ್ಲಿ ಬಲಪಂಥೀಯ ರಾಜಕೀಯದ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಐಎಎಸ್ ಹುದ್ದೆಗೆ ನೀಡಿದ ರಾಜಿನಾಮೆ ಪತ್ರದಲ್ಲೂ ಅದನ್ನು ಸ್ಪಷ್ಟವಾಗಿ ತಿಳಿಸಿದ್ದೇನೆ. ಇದಕ್ಕಾಗಿ ನನ್ನ ವಿರುದ್ಧ ವ್ಯವಸ್ಥಿತವಾಗಿ ಸಂಬಂಧ ಪಡದೇ ಇರುವ ವಿಷಯಗಳಲ್ಲೂ ನನ್ನ ಹೆಸರನ್ನು ಸೇರಿಸಿ ಅಪಪ್ರಚಾರ ಮಾಡಲಾಗುತ್ತಿದೆ. ಬಲಪಂಥೀಯವಾದದ ವಿರುದ್ಧ ಹೋರಾಟ ಮಾಡುವವರ ವಿರುದ್ಧ ಈ ರೀತಿಯ ಆರೋಪಗಳು ಸಾಮಾನ್ಯವಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

22 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

23 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

25 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

27 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

31 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

37 mins ago