ಮೈಸೂರು: ೨೦೨೪ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಹಲವಾರು ಚಟುವಟಿಕೆಗಳು ಗರಿಗೆದರಿದ್ದು, ಚಾಮರಾಜನಗರ ಕ್ಷೇತ್ರದ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ತಮ್ಮ ವೈದ್ಯ ವೃತ್ತಿಗೆ ರಾಜೀನಾಮೆ ಸಲ್ಲಿಸಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ.
ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಖ್ಯಾತ ಬೆನ್ನುಹುರಿ ತಜ್ಞ ಹಾಗೂ ಪ್ರಾಧ್ಯಾಪಕರಾಗಿದ್ದ ಕೆಲಸ ಮಾಡುತ್ತಿದ್ದ ಡಾ. ಎನ್.ಎಸ್ ಮೋಹನ್ ಅವರು ತಮ್ಮ ಲಕ್ಷಾಂತರ ರೂ. ವೇತನದ ಸರ್ಕಾರಿ ಹುದ್ದೆಯನ್ನು ತೊರೆದು, ಬಿಜೆಪಿ ಪಕ್ಷದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ.
ಕಳೆದ ೧೫ ವರ್ಷಗಳಿಂದ ಸರ್ಕಾರಿ ವೈದ್ಯರಾಗಿ ಕೆಲಸ ನಿರ್ವಹಿಸುತ್ತಿದ್ದರು. ರಾಜಕೀಯದಲ್ಲಿ ಸಕ್ರಿಯರಾಗುವ ಉದ್ದೇಶದಿಂದ ಉನ್ನತ ಹುದ್ದೆಗೇರುವ ಅವಕಾಶವಿದ್ದರು ಕಳೆದುಕೊಂಡಿದ್ದಾರೆ. ಬಿಜೆಪಿ ಪಕ್ಷದ ಅಭ್ಯರ್ಥಿ ಆಕಾಂಕ್ಷಿಯಾಗಿರುವ ಮೋಹನ್ ಅವರು ಆರ್‌ಎಸ್‌ಎಸ್ ನೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ. ಈ ಹಿನ್ನಲೆ ಬಿಜೆಪಿ ವರಿಷ್ಠರು ಟಿಕೆಟ್ ನೀಡುವ ಭರವಸೆಯನ್ನು ನೀಡಿದ್ದಾರೆ ಎನ್ನಲಾಗಿದೆ.
ಇನ್ನೂ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಅಳಿಯರಾಗಿರುವ ಮೋಹನ್ ಅವರು, ತಮ್ಮ ಮಾವನ ಮುಂದಿನ ಉತ್ತರಾಧಿಕಾರಿ ಎಂದು ಹೇಳಲಾಗುತ್ತಿದೆ.