ಬೆಂಗಳೂರು: ಟನಲ್ ರಸ್ತೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಸಂಸದ ತೇಜಸ್ವಿ ಸೂರ್ಯ ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ತೇಜಸ್ವಿ ಸೂರ್ಯ ಡಿಸಿಎಂ ಡಿಕೆಶಿ ಭೇಟಿಯಾಗಿ ಚರ್ಚೆ ನಡೆಸಿದರು.
ಇದನ್ನು ಓದಿ: ಕರೂರ್ ಕಾಲ್ತುಳಿತ ದುರಂತ ಪ್ರಕರಣ: ನಾಳೆ ನಟ ವಿಜಯ್‌ರಿಂದ ಸಂತ್ರಸ್ತ ಕುಟುಂಬಗಳ ಭೇಟಿ
ಸುರಂಗ ರಸ್ತೆ ಸಾಧಕ-ಬಾಧಕಗಳ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಿದ ಅವರು, ಟ್ಯಾಬ್ ಮೂಲಕ ಸುರಂಗ ರಸ್ತೆಯಿಂದಾಗುವ ಸಮಸ್ಯೆ ಬಗ್ಗೆ ವಿವರಣೆ ನೀಡಿದರು.
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸುರಂಗ ರಸ್ತೆ ನಿರ್ಮಾಣಕ್ಕೆ ಮುಂದಾಗಿದೆ. ಈ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಸಂಸದ ತೇಜಸ್ವಿ ಸೂರ್ಯ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ನಡುವೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ತೇಜಸ್ವಿ ಸೂರ್ಯ ಸುದೀರ್ಘ ಮಾತುಕತೆ ನಡೆಸಿದ್ದಾರೆ.





