Mysore
24
overcast clouds

Social Media

ಭಾನುವಾರ, 24 ಮೇ 2026
Light
Dark

ಖಾಲಿ ಟ್ರಂಕ್‌ ಹಿಡಿದು ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಖಾಲಿ ಟ್ರಂಕ್‌ ಹಿಡಿದು ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೆಟ್ರೋ ಬಳಿ ಸಂಸದ ತೇಜಸ್ವಿ ಸೂರ್ಯ ಇಂದು ಪ್ರತಿಭಟನೆ ನಡೆಸಲು ಮುಂದಾದರು. ಈ ವೇಳೆ ತೇಜಸ್ವಿ ಸೂರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದು, ವಾಹನದಲ್ಲಿ ಕೂರಿಸಿ ಠಾಣೆಗೆ ಕರೆದೊಯ್ದರು.

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಇದು ಧರಣಿ ಅಥವಾ ಮುಷ್ಕರ ಅಲ್ಲ. ನಾನು ಸಂಸತ್‌ ಭವನಕ್ಕೆ ಹೋಗಬೇಕು. ಹಾಗಾಗಿ ಏರ್‌ಪೋರ್ಟ್‌ಗೆ ಹೋಗಲು ಬಸವನಗುಡಿವರೆಗೆ ಮೆಟ್ರೋದಲ್ಲಿ ಹೋಗಬೇಕಿದೆ. ಅದಕ್ಕಾಗಿ ಟಿಕೆಟ್‌ ತೆಗೆದುಕೊಂಡಿದ್ದೇನೆ. ಅಧಿಕಾರಿಗಳು ಅಡ್ಡಿಪಡಿಸಬಾರದು. ಪ್ರಯಾಣಿಕರ ರೀತಿಯಲ್ಲಿ ನಮಗೂ ಮೆಟ್ರೋದಲ್ಲಿ ಪ್ರಯಾಣ ಮಾಡಲು ಅವಕಾಶ ಇದೆ ಎಂದು ಹೇಳಿದರು.

Tags:
error: Content is protected !!