ಮೈಸೂರು: ಮೈಸೂರು-ಕೊಡಗು ಅಭಿವೃದ್ಧಿ ಯೋಜನೆಗಳಿಗೆ ಸಹಕರಿಸಿ, ಅವುಗಳನ್ನು ಬೆಂಬಲಿಸಿ ಶೀಘ್ರ ಅನುಷ್ಠಾನಕ್ಕೆ ತರಲು ನೆರವಾಗುತ್ತಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಸರ್ಕಾರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿˌ ಮೈಸೂರಿನಲ್ಲಿರುವ ರೈಲ್ವೆ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಹಾಗೂ ಐತಿಹಾಸಿಕ ಮೈಸೂರು ರೈಲ್ವೆ ನಿಲ್ದಾಣದ ಆಧುನೀಕರಣಗೊಳಿಸುವ ಕುರಿತು ಮತ್ತು ಮೈಸೂರಿನಲ್ಲಿ ವಿಮಾನ ನಿಲ್ದಾಣದ ವಿಸ್ತರಣೆಗೆ ಅನುಕೂಲವಾಗುವಂತೆ ರೈಲ್ವೆ ಹಳಿಗಳ ಸ್ಥಳಾಂತರ ವಿಷಯದ ಕುರಿತು ಸಚಿವರಿಗೆ ಸಲ್ಲಿಸಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಅವರು ಸದರಿ ಯೋಜನೆಗಳ ತ್ವರಿತ ಕ್ರಮಕ್ಕೆ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು ಎಂದಿದ್ದಾರೆ.
ನಮ್ಮ ಎಲ್ಲಾ ಬೇಡಿಕೆಗಳಿಗೆˌ ಮೈಸೂರಿನ ಅಭಿವೃದ್ದಿ ಯೋಜನೆಗಳಿಗೆ ಸಹಕರಿಸಿ, ಬೆಂಬಲಿಸಿ, ಅವುಗಳನ್ನು ಶೀಘ್ರ ಅನುಷ್ಠಾನಕ್ಕೆ ತರಲು ನೆರವಾಗುತ್ತಿರುವ ಸಚಿವರಿಗೆ ಈ ಮೂಲಕ ಮೈಸೂರು-ಕೊಡಗು ಜನತೆಯ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ.
ಬೃಹತ್ ಯಂತ್ರ ಬಳಸದೆ ಕೆಲಸ; ಇನ್ನೂ 10-15 ದಿನ ಪ್ರವಾಸಿಗರ ಪ್ರವೇಶಕ್ಕಿಲ್ಲ ಅವಕಾಶ ನವೀನ್ ಡಿಸೋಜ ಮಡಿಕೇರಿ : ಕೊಡಗಿನ…
ಮುಂದಿನ 34 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನು; ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯೂ ದೂರ ಕೆ.ಬಿ.ರಮೇಶ ನಾಯಕ ಮೈಸೂರು :…
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನರಚನೆಗೆ ತಯಾರಿ ಆರಂಭಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿದ ನಂತರ ದಿಲ್ಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್…
ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್‌ಟಿಸಿ…
ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…
ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…