ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ಮಾಡಿ ಅಭಿವೃದ್ಧಿ ವಿಚಾರವಾಗಿ ಕೆಲಕಾಲ ಚರ್ಚೆ ನಡೆಸಿದರು.
ಬೆಂಗಳೂರಿನ ವಿಜಯೇಂದ್ರ ಅವರ ನಿವಾಸದಲ್ಲಿ ಭೇಟಿ ಮಾಡಿದ ಸಂಸದ ಯದುವೀರ್ ಒಡೆಯರ್ ಅವರು, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ, ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳು, ಮೂಲ ಸೌಕರ್ಯಗಳ ಸುಧಾರಣೆ ಮತ್ತು ಕ್ಷೇತ್ರದ ಜನತೆಗೆ ಸರ್ಕಾರದ ವಿವಿಧ ಯೋಜನೆಗಳನ್ನು ತಲುಪಿಸುವುದರ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಿದರು.





