Mysore
18
clear sky

Social Media

ಮಂಗಳವಾರ, 18 ಫೆಬ್ರವರಿ 2025
Light
Dark

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ ಮಾರ್ಚ್‌.22ಕ್ಕೆ ಮುಂದೂಡಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಮೇಲ್ಮನವಿಯನ್ನು ಮಾರ್ಚ್‌.22ಕ್ಕೆ ಮುಂದೂಡಲಾಗಿದೆ ಎಂದು ಹೈಕೋರ್ಟ್‌ ಆದೇಶ ಹೊರಡಿಸಿದೆ.

ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಏಕಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಅನ್ವಯ ಇಂದು(ಜನವರಿ.25) ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ವಿಚಾರಣೆ ನಡೆಸಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಪರ ವಕೀಲ ವಾದಮಂಡನೆಗೆ ಅವಕಾಶ ನೀಡಬೇಕಾಗಿ ಕೇಳಿದ್ದಾರೆ. ಹಾಗಾಗಿ ಈ ಅರ್ಜಿ ವಿಚಾರಣೆಯನ್ನು ಮಾರ್ಚ್‌.22ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಹೇಳಿದೆ.

ಏನಿದು ಪ್ರಕರಣ?

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ರಾಜ್ಯಪಾಲರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕಸದಸ್ಯ ಪೀಠವೂ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿತ್ತು. ಹೀಗಾಗಿ ಸಿದ್ದರಾಮಯ್ಯ ಅವರು ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು.

Tags: