ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಮೇಲ್ಮನವಿಯನ್ನು ಮಾರ್ಚ್.22ಕ್ಕೆ ಮುಂದೂಡಲಾಗಿದೆ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.
ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಏಕಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಅನ್ವಯ ಇಂದು(ಜನವರಿ.25) ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ವಿಚಾರಣೆ ನಡೆಸಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಪರ ವಕೀಲ ವಾದಮಂಡನೆಗೆ ಅವಕಾಶ ನೀಡಬೇಕಾಗಿ ಕೇಳಿದ್ದಾರೆ. ಹಾಗಾಗಿ ಈ ಅರ್ಜಿ ವಿಚಾರಣೆಯನ್ನು ಮಾರ್ಚ್.22ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಹೇಳಿದೆ.
ಏನಿದು ಪ್ರಕರಣ?
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ರಾಜ್ಯಪಾಲರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕಸದಸ್ಯ ಪೀಠವೂ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿತ್ತು. ಹೀಗಾಗಿ ಸಿದ್ದರಾಮಯ್ಯ ಅವರು ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…