ಬೆಂಗಳೂರು: ಮುಡಾ ಪ್ರಕರಣದಲ್ಲಿ ನಿಜವಾದ ಕಳ್ಳ ಸಚಿವ ಬೈರತಿ ಸುರೇಶ್ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರವಾಗಿ ಆರೋಪ ಮಾಡಿದ್ದಾರೆ.
ಸಚಿವ ಬೈರತಿ ಸುರೇಶ್ ಅವರು ನಿನ್ನೆ ಛಲವಾದಿ ನಾರಾಯಣಸ್ವಾಮಿ ಮುಡಾ ದಾಖಲೆಯನ್ನು ಕದ್ದಿರಬಹುದು ಎಂದು ಆರೋಪ ಮಾಡಿದ್ದರು. ಈ ಆರೋಪದ ಕುರಿತು ಛಲವಾದಿ ನಾರಾಯಣಸ್ವಾಮಿ ಇಂದು(ಅಕ್ಟೋಬರ್.19) ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದು ಇ.ಡಿ. ತನಿಖಾ ತಂಡವು ನಿನ್ನೆ(ಶುಕ್ರವಾರ) ಮುಡಾ ಕಚೇರಿ ಮೇಲೆ ರೇಡ್ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಹೀಗಾಗಿ ನಾನು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದೆ. ಬಳಿಕ ಸುರೇಶ್ ಅವರು ಹೆಲಿಕಾಫ್ಟರ್‌ನಲ್ಲಿ ಹೋಗಿ ದಾಖಲೆ ತೆಗೆದುಕೊಂಡು ಬಂದಿದ್ದಾರೆ ಎಂಬ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಹೀಗಾಗಿ ಸಚಿವ ಬೈರತಿ ಅವರನ್ನು ಸಹ ತನಿಖೆ ನಡೆಸಬೇಕು ಎಂದು ಹೇಳಿದ್ದೆ ಅಷ್ಟೇ. ಆದರೆ ಸುರೇಶ್ ಅವರು ನನ್ನನ್ನೇ ಕಳ್ಳ ಅಂದಿದ್ದು ನಿಜವಾದ ಕಳ್ಳ ಅವರೇ ಆಗಿದ್ದಾರೆ ಎಂದು ತಿರುಗೇಟು ನೀಡಿದರು.
ಸುರೇಶ್ ಅವರೇ ನೀವು ಮಂತ್ರಿ ಆಗೋಕೆ ಯೋಗ್ಯರಲ್ಲ. ನಾನು ಮುಡಾ ದಾಖಲೆಗಳನ್ನು ಕದ್ದಿದ್ದರೆ ನೀವು ಸಚಿವರಾಗಿ ಏನು ಕಡ್ಲೆಪುರಿ ಅಥವಾ ಚುರುಮುರಿ ತಿನ್ನುತ್ತಿದ್ದರೇ? ತಾವು ಮುಡಾ ಸಚಿವರಾಗಿ ನನ್ನ ಮೇಲೆ ದೂರು ದಾಖಲಿಸಬಹುದಿತ್ತು ಅಲ್ಲವೇ? ಎಂದು ವಾಗ್ದಾಳಿ ಮಾಡಿದ್ದಾರೆ.
ಮುಡಾ ಪ್ರಕರಣ ರಾಜ್ಯದಲ್ಲಿ ದೊಡ್ಡ ಸುದ್ದಿಯಾದ ಕೂಡಲೇ ಹೆಲಿಕಾಫ್ಟರ್‌ನಲ್ಲಿ ಮುಡಾ ಕಚೇರಿಗೆ ಹೋಗಿ ದಾಖಲೆಗಳನ್ನು ತಂದಿದ್ದು ಸುರೇಶ್. ಆ ದಿನ ಅಲ್ಲಿಂದ ಮುಡಾ ದಾಖಲೆಗಳನ್ನು ತರದೇ ಹೋಗಿದ್ದರೆ, ಇವತ್ತಿನ ದಿನ ಈ ಕೇಸ್ ಇಷ್ಟೊಂದು ಹೈಪ್ ಆಗುತ್ತಿರಲಿಲ್ಲ. ಸಿಎಂ ಸಿದ್ದರಾಮಯ್ಯ ಅವರನ್ನು ಸಿಕ್ಕಿಸಿದ್ದೇ ಸುರೇಶ್ ಎಂದು ಆರೋಪಿಸಿದ್ದಾರೆ.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…