ರಾಜ್ಯ

ಮುಡಾ ಪ್ರಕರಣ: ಸಚಿವ ಬೈರತಿ ಸುರೇಶ್‌ ಅವರೇ ನಿಜವಾದ ಕಳ್ಳ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಪ್ರಕರಣದಲ್ಲಿ ನಿಜವಾದ ಕಳ್ಳ ಸಚಿವ ಬೈರತಿ ಸುರೇಶ್‌ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರವಾಗಿ ಆರೋಪ ಮಾಡಿದ್ದಾರೆ.

ಸಚಿವ ಬೈರತಿ ಸುರೇಶ್‌ ಅವರು ನಿನ್ನೆ ಛಲವಾದಿ ನಾರಾಯಣಸ್ವಾಮಿ ಮುಡಾ ದಾಖಲೆಯನ್ನು ಕದ್ದಿರಬಹುದು ಎಂದು ಆರೋಪ ಮಾಡಿದ್ದರು. ಈ ಆರೋಪದ ಕುರಿತು ಛಲವಾದಿ ನಾರಾಯಣಸ್ವಾಮಿ ಇಂದು(ಅಕ್ಟೋಬರ್‌.19) ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದು ಇ.ಡಿ. ತನಿಖಾ ತಂಡವು ನಿನ್ನೆ(ಶುಕ್ರವಾರ) ಮುಡಾ ಕಚೇರಿ ಮೇಲೆ ರೇಡ್‌ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಹೀಗಾಗಿ ನಾನು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದೆ. ಬಳಿಕ ಸುರೇಶ್‌ ಅವರು ಹೆಲಿಕಾಫ್ಟರ್‌ನಲ್ಲಿ ಹೋಗಿ ದಾಖಲೆ ತೆಗೆದುಕೊಂಡು ಬಂದಿದ್ದಾರೆ ಎಂಬ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಹೀಗಾಗಿ ಸಚಿವ ಬೈರತಿ ಅವರನ್ನು ಸಹ ತನಿಖೆ ನಡೆಸಬೇಕು ಎಂದು ಹೇಳಿದ್ದೆ ಅಷ್ಟೇ. ಆದರೆ ಸುರೇಶ್‌ ಅವರು ನನ್ನನ್ನೇ ಕಳ್ಳ ಅಂದಿದ್ದು ನಿಜವಾದ ಕಳ್ಳ ಅವರೇ ಆಗಿದ್ದಾರೆ ಎಂದು ತಿರುಗೇಟು ನೀಡಿದರು.

ಸುರೇಶ್‌ ಅವರೇ ನೀವು ಮಂತ್ರಿ ಆಗೋಕೆ ಯೋಗ್ಯರಲ್ಲ. ನಾನು ಮುಡಾ ದಾಖಲೆಗಳನ್ನು ಕದ್ದಿದ್ದರೆ ನೀವು ಸಚಿವರಾಗಿ ಏನು ಕಡ್ಲೆಪುರಿ ಅಥವಾ ಚುರುಮುರಿ ತಿನ್ನುತ್ತಿದ್ದರೇ? ತಾವು ಮುಡಾ ಸಚಿವರಾಗಿ ನನ್ನ ಮೇಲೆ ದೂರು ದಾಖಲಿಸಬಹುದಿತ್ತು ಅಲ್ಲವೇ? ಎಂದು ವಾಗ್ದಾಳಿ ಮಾಡಿದ್ದಾರೆ.

ಮುಡಾ ಪ್ರಕರಣ ರಾಜ್ಯದಲ್ಲಿ ದೊಡ್ಡ ಸುದ್ದಿಯಾದ ಕೂಡಲೇ ಹೆಲಿಕಾಫ್ಟರ್‌ನಲ್ಲಿ ಮುಡಾ ಕಚೇರಿಗೆ ಹೋಗಿ ದಾಖಲೆಗಳನ್ನು ತಂದಿದ್ದು ಸುರೇಶ್‌. ಆ ದಿನ ಅಲ್ಲಿಂದ ಮುಡಾ ದಾಖಲೆಗಳನ್ನು ತರದೇ ಹೋಗಿದ್ದರೆ, ಇವತ್ತಿನ ದಿನ ಈ ಕೇಸ್‌ ಇಷ್ಟೊಂದು ಹೈಪ್‌ ಆಗುತ್ತಿರಲಿಲ್ಲ. ಸಿಎಂ ಸಿದ್ದರಾಮಯ್ಯ ಅವರನ್ನು ಸಿಕ್ಕಿಸಿದ್ದೇ ಸುರೇಶ್ ಎಂದು ಆರೋಪಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

2 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

6 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

6 hours ago